HEALTH TIPS

2021ರಲ್ಲಿ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ 1 ಲಕ್ಷ 53 ಸಾವಿರ ಜನ ಸಾವು: ಕೇಂದ್ರ

 

               ನವದೆಹಲಿ: ದೇಶದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, 2021 ರಲ್ಲಿ ಒಟ್ಟು 4,12,432 ರಸ್ತೆ ಅಪಘಾತಗಳು ಸಂಭವಿಸಿವೆ. ಈ ಅಪಘಾತಗಳು 1,53,972 ಜನರನ್ನು ಬಲಿ ತೆಗೆದುಕೊಂಡಿವೆ. ಅಲ್ಲದೆ 3,84,448 ಜನ ಗಾಯಗೊಂಡಿದ್ದಾರೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಹೊಸ ವರದಿ ತಿಳಿಸಿದೆ.

              'ಭಾರತದಲ್ಲಿ ರಸ್ತೆ ಅಪಘಾತಗಳು - 2021' ಎಂಬ ಶೀರ್ಷಿಕೆಯ ವರದಿಯನ್ನು ಕೇಂದ್ರ ಬಿಡುಗಡೆ ಮಾಡಿದ್ದು, 2019 ಕ್ಕೆ ಹೋಲಿಸಿದರೆ 2021ರಲ್ಲಿ ಕಡಿಮೆ ಅಪಘಾತಗಳು ಸಂಭವಿಸಿವೆ ಎಂದು ವರದಿ ತಿಳಿಸಿದೆ.

            "2019 ಕ್ಕೆ ಹೋಲಿಸಿದರೆ 2021 ರಲ್ಲಿ ರಸ್ತೆ ಅಪಘಾತಗಳು ಶೇಕಡಾ 8.1 ರಷ್ಟು ಕಡಿಮೆಯಾಗಿದೆ ಮತ್ತು ಗಾಯಗಳ ಸಂಖ್ಯೆ ಸಹ ಶೇಕಡಾ 14.8 ರಷ್ಟು ಕಡಿಮೆಯಾಗಿದೆ.

             2021 ರಲ್ಲಿ ನಡೆದ ರಸ್ತೆ ಅಪಘಾತಗಳಲ್ಲಿ 16,397 ಜನ ಸೀಟ್ ಬೆಲ್ಟ್ ಧರಿಸದ ಕಾರಣಕ್ಕೆ ಮೃತಪಟ್ಟಿದ್ದಾರೆ. ಈ ಪೈಕಿ 8,438 ಚಾಲಕರು, 7,959 ಜನ ಪ್ರಯಾಣಿಕರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯದ ವರದಿ ತಿಳಿಸಿದೆ.

         ಇದೇ ವೇಳೆ ಹೆಲ್ಮೆಟ್ ಧರಿಸದ ಕಾರಣಕ್ಕೆ 46,593 ಜನ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಇದರಲ್ಲಿ 32,877 ಜನ ಸವಾರರಾದರೆ, 13,716 ಜನ ಪ್ರಯಾಣಿಕರು ಎಂದು ವರದಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries