ಗುಜರಾತ್: ಭಾರತೀಯ ಕರಾವಳಿ ಕಾವಲು ಪಡೆ ಮತ್ತು ಗುಜರಾತ್ ಭಯೋತ್ಪಾದನಾ ನಿಗ್ರಹ ದಳವು ಸೋಮವಾರ ಭಾರತೀಯ ಜಲಪ್ರದೇಶದಲ್ಲಿ ಪಾಕಿಸ್ತಾನದ ಮೀನುಗಾರಿಕಾ ದೋಣಿಯಿಂದ 300 ಕೋಟಿ ರೂಪಾಯಿ ಮೌಲ್ಯದ ಶಸ್ತ್ರಾಸ್ತ್ರಗಳು, ಮದ್ದು ಗುಂಡುಗಳು ಮತ್ತು 40 ಕೆಜಿ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ದೋಣಿಯಲ್ಲಿದ್ದ 10 ಮಂದಿ ಸಿಬ್ಬಂದಿಯನ್ನು ಸಹ ಬಂಧಿಸಲಾಗಿದೆ.
ಗುಜರಾತ್ ಎಟಿಎಸ್ ಜೊತೆಗಿನ ಜಂಟಿ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಮೀನುಗಾರಿಕಾ ಬೋಟ್ ಅಲ್ ಸೊಹೆಲಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಕೋಸ್ಟ್ ಗಾರ್ಡ್ ಟ್ವೀಟ್ ನಲ್ಲಿ ತಿಳಿಸಿದೆ.
ಶೋಧ ಕಾರ್ಯಾಚರಣೆಯಲ್ಲಿ 300 ಕೋಟಿ ರೂಪಾಯಿ ಮೌಲ್ಯದ ಸುಮಾರು 40 ಕೆಜಿ ಮಾದಕ ವಸ್ತು ಮತ್ತು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ತನಿಖೆಗಾಗಿ ಓಖಾಗೆ ದೋಣಿಯನ್ನು ತರಲಾಗುತ್ತಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ.