ಮಂಜೇಶ್ವರ:ಟೀಚರ್ಸ್ ಸ್ಪೋಟ್ರ್ಸ್ ಕೌನ್ಸಿಲ್ ಕಾಸರಗೋಡು ಸೀಸನ್ 4 ಅಂಡರ್ ಆರ್ ಅರ್ಮ್ ಅಧ್ಯಾಪಕರ ಕ್ರಿಕೆಟ್ ಪಂದ್ಯಾಟ ಮೀಯಪದವು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಶಾಲಾ ಆಡಳಿತ ಸಲಹೆಗಾರ, ನಿವೃತ್ತ ಮುಖ್ಯೋಪಾಧ್ಯಾಯ ಶ್ರೀಧರ್ ರಾವ್ ಉದ್ಘಾಟಿಸಿದರು. ಅವರು ಮಾತನಾಡಿ ಅಧ್ಯಾಪಕರು ಶಿಕ್ಷಣದ ಜೊತೆಗೆ ಕ್ರೀಡಾ ರಂಗಕ್ಕೆ ಪ್ರೋತ್ಸಾಹ ನೀಡುವುದು ಉತ್ತಮ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು.
ಟಿ ಎಸ್ ಸಿ ಅಧ್ಯಕ್ಷ ಸದಾಶಿವ ಮಾಸ್ತರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಹೈಸ್ಕೂಲ್ ವಿಭಾಗದ ಮುಖ್ಯೋಪಾಧ್ಯಾಯ ಶಿವಶಂಕರ್ ಭಟ್, ಉದ್ಯಮಿ ಚಂದ್ರಶೇಖರ ಎಂ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಉದಯಕುಮಾರ್ ಶೆಟ್ಟಿ, ಪ್ರಶಾಂತ್ ರೈ, ಉದಯ ಸಾರಂಗ್, ರಘುವೀರ್ ರಾವ್, ಉಪಸ್ಥಿತರಿದ್ದರು. ಟಿ ಎಸ್ ಸಿ ಯ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ ಸ್ವಾಗತಿಸಿ, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ ವಂದಿಸಿದರು. ಸುನಿಲ್ ಮಾಸ್ತರ್ ಮುಂಡಿತ್ತಡ್ಕ ಕಾರ್ಯಕ್ರಮ ನಿರ್ವಹಣೆ ಮಾಡಿದರು.
ಟೀಚರ್ಸ್ ಸ್ಪೋಟ್ರ್ಸ್ ಕೌನ್ಸಿಲ್ ಕಾಸರಗೋಡು ಸೀಸನ್ 4 ಕ್ರಿಕೆಟ್ ಪಂದ್ಯಾಟಕ್ಕೆ ಮಿಯಪದವು ಶಾಲೆಯಲ್ಲಿ ಚಾಲನೆ
0
ಡಿಸೆಂಬರ್ 30, 2022
Tags