ಜೋಧಪುರ: ರಾಜಸ್ಥಾನದ ಜೋಧಪುರದಲ್ಲಿ ಮದುವೆ ಮನೆಯಲ್ಲಿ ಅಡುಗೆ ಅನಿಲದ ಸಿಲಿಂಡರ್ ಸ್ಫೋಟಗೊಂಡು ಐದು ಮಂದಿ ಮೃತಪಟ್ಟಿದ್ದು, 49 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೂಂಗಾರ ಗ್ರಾಮದಲ್ಲಿ ಮನೆಯ ಸ್ಟೋರ್ ರೂಂನಲ್ಲಿ ಇರಿಸಿಲಾಗಿದ್ದ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡು ಸ್ಫೋಟ ಸಂಭವಿಸಿದೆ ಎಂದು ಜೋಧಪುರ ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಅನಿಲ್ ಕಯಾಲ್ ಮಾಹಿತಿ ನೀಡಿದ್ದಾರೆ.
ಗಾಯಾಳುಗಳನ್ನು ಎಂಜಿಎಚ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಒದಗಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಹಿಮಾಂಶು ಗುಪ್ತಾ ತಿಳಿಸಿದ್ದಾರೆ.