ನವದೆಹಲಿ: ಬಲವಂತದ ಮತಾಂತರದ ಬಗ್ಗೆ ಮಾತನಾಡಿರುವ ಕೇಂದ್ರ ಗೃಹ ಸಚಿವರು ಇದು ದೇಶದ ಭದ್ರತೆಗೆ ಬೆದರಿಕೆ ಎಂದು ಹೇಳಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಸಂಸತ್ತಿನಲ್ಲಿ ಮಾತನಾಡಿದ್ದು ಮಾರ್ಗಸೂಚಿಗಳನ್ನು ಅನುಸರಿಸದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ಬಲವಂತದ ಮತಾಂತರಗಳು ರಾಷ್ಟ್ರೀಯ ಭದ್ರತೆಗೆ ಗಂಭೀರ ಬೆದರಿಕೆಯಾಗಿದ್ದು, ನರೇಂದ್ರ ಮೋದಿ ನೇತೃತ್ವದ ಸರ್ಕಾರದಲ್ಲಿ ಅಂತಹ ಯಾವುದೇ ಚಟುವಟಿಕೆಗಳನ್ನು ಉತ್ತೇಜಿಸುವುದಿಲ್ಲ ಎಂದು ಅಮಿತ್ ಶಾ ಹೇಳಿದರು.
ಹಿಂದಿನ ಯುಪಿಎ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಅಮಿತ್ ಶಾ, ಬಲವಂತದ ಮತಾಂತರದ ಘಟನೆಗಳನ್ನು ತಡೆಯಲು ಅದು ಸಾಕಷ್ಟು ಕ್ರಮಗಳನ್ನ ತೆಗೆದುಕೊಂಡಿರಲಿಲ್ಲ ಎಂದು ಆರೋಪಿಸಿದರು. ಏತನ್ಮಧ್ಯೆ, ಈ ವಿಷಯದ ಬಗ್ಗೆ ರಾಜಕೀಯ ಚೆರ್ಚೆಗಳು ಶೀಘ್ರದಲ್ಲೇ ಸ್ಫೋಟಗೊಳ್ಳುವ ನಿರೀಕ್ಷೆಯಿದೆ.