ನಾಗಪುರ: ಮಹಾರಾಷ್ಟ್ರ ಹಾಗೂ ಗೋವಾ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದರು.
ನಾಗಪುರಕ್ಕೆ ಬೆಳಗ್ಗೆ ಆಗಮಿಸಿದ ಪ್ರಧಾನಿ ಅವರನ್ನು ಮಹಾರಾಷ್ಟ್ರ ರಾಜ್ಯಪಾಲ ಕೊಶಿಯಾರಿ, ಕೇಂದ್ರ ಸಚಿವ ನಿತಿನ್ ಗಡ್ಕರಿ, ಮುಖ್ಯಮಂತ್ರಿ ಏಕನಾಥ್ ಶಿಂಧೆ, ಉಪಮುಖ್ಯಮಂತ್ರಿ ದೇವೇಂದ್ರ ಫಡಣಾವೀಸ್ ಆತ್ಮೀಯವಾಗಿ ಬರಮಾಡಿಕೊಂಡರು.
ಇಲ್ಲಿನ ರೈಲು ನಿಲ್ದಾಣದಲ್ಲಿ ಬಿಲಾಸಪುರ-ನಾಗಪುರ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಿದರು. ಇದು ದೇಶದ 6ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು. ಇದು ನಾಗಪುರ ಹಾಗೂ ಛತ್ತೀಸಗಢ ರಾಜ್ಯದ ಬಿಲಾಸಪುರ ನಡುವೆ ಸಂಚರಿಸಲಿದೆ.
ಇದೇ ವೇಳೆ ಪ್ರಧಾನಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೂ ಅಡಿಗಲ್ಲು ಹಾಕಿದರು.
PM Modi flags off Vande Bharat Express on Nagpur-Bilaspur route
Read @ANI Story | aninews.in/news/national/
#PMModi #VandeBharatExpress #Nagpur #Maharashtra