ನವದೆಹಲಿ: 'ದೇಶವು ಯಶಸ್ಸಿನ ಉತ್ತುಂಗದತ್ತ ಸಾಗಬೇಕಾದರೆ ಹಿಂದಿನ ಸಂಕುಚಿತ ದೃಷ್ಟಿಕೋನಗಳಿಂದ ಮುಕ್ತವಾಗಬೇಕು' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
'ವೀರ ಬಾಲ ದಿನ' ಕಾರ್ಯಕ್ರಮದಲ್ಲಿ ಸೋಮವಾರ ಭಾಗಿಯಾಗಿದ್ದ ಅವರು ಸಿಖ್ಖರ ಧರ್ಮಗುರು ಗುರು ಗೋವಿಂದ್ ಸಿಂಗ್ ಅವರ ಮಕ್ಕಳಾದ ಹುತಾತ್ಮ ಜೊರಾವರ್ ಸಿಂಗ್ ಮತ್ತು ಫತೇಹ್ ಸಿಂಗ್‌ಗೆ ಗೌರವ ಸಲ್ಲಿಸಿದರು.