ಕಾಸರಗೋಡು: ಸಶಸ್ತ್ರ ಪಡೆಗಳ ಧ್ವಜ ದಿನವನ್ನು ಬುಧವಾರ ಆಚರಿಸಲಾಯಿತು. ಈ ಸಂದರ್ಭ ದೇಶಕ್ಕಾಗಿ ಹೋರಾಡಿ ಮಡಿದ ವೀರ ಯೋಧರನ್ನು ಸ್ಮರಿಸಲಾಯಿತು ಮತ್ತು ಅವರ ಕುಟುಂಬಗಳು ಮತ್ತು ಮಾಜಿ ಸೈನಿಕರಲ್ಲಿ ಸ್ಥೈರ್ಯ ತುಂಬಿಸಲಾಯಿತು. ಜಿಲ್ಲಾ ಸೈನಿಕ ಕಲ್ಯಾಣ ಇಲಾಖೆಯ ಜಿಲ್ಲಾ ಕಛೇರಿಯ ಆಶ್ರಯದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಾರ್ಯಕ್ರಮ ನಡೆಯಿತು. ಜಿಲ್ಲಾಧಿಕಾರಿ ಭಂಡಾರಿ ಸ್ವಾಗತ್ ರಣವೀರಚಂದ್ ಅವರು ಎನ್‍ಸಿಸಿ ಕೆಡೆಟ್‍ನಿಂದ ಧ್ವಜ ಸ್ವೀಕರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಇದಕ್ಕೂ ಮೊದಲು ಕಾರ್ಗಿಲ್ ಸ್ಮಾರಕಕ್ಕೆ ಜಿಲ್ಲಾಧಿಕಾರಿ ಪುಷ್ಪಾರ್ಚನೆ ನಡೆಸಿದರು. ಸೈನಿಕ ಕಲ್ಯಾಣ ಜಿಲ್ಲಾ ಅಧಿಕಾರಿಗಳು, ನೌಕರರು ಹಾಗೂ ವಿವಿಧ ಮಾಜಿ ಸೈನಿಕ ಸಂಘಟನೆ ಪದಾಧಿಕಾರಿಗಳು ಭಾಗವಹಿಸಿದ್ದರು.
ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ, ಕಾರ್ಗಿಲ್ ಸ್ಮಾರಕದಲ್ಲಿ ಪುಷ್ಪಾರ್ಚನೆ
0
ಡಿಸೆಂಬರ್ 07, 2022
Tags