ಕುಂಬಳೆ: ಕುಂಬಳೆ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಹವಾಮಾನ ಕೇಂದ್ರ ಸ್ಥಾಪಿಸಲಾಗಿದ್ದು ಶಾಸಕ ಎ.ಕೆ.ಎಂ. ಅಶ್ರಫ್ ಉದ್ಘಾಟಿಸಿದರು. ಸಮಗ್ರ ಶಿಕ್ಷಾ ಕೇರಳಂ ಯೋಜನೆಯ ಭಾಗವಾಗಿ ಆಯ್ದ ಶಾಲೆಗಳಲ್ಲಿ ಹವಾಮಾನ ನಿಗಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ.
ವೈಜ್ಞಾನಿಕ ಉಪಕರಣಗಳು ಮತ್ತು ತಂತ್ರಜ್ಞಾನದ ಸಹಾಯದಿಂದ ವಿದ್ಯಾರ್ಥಿಗಳು ಹವಾಮಾನವನ್ನು ವೀಕ್ಷಿಸಲು ಸಾಧ್ಯವಾಗಲಿದೆ. ಗ್ರಾ.ಪಂ. ಅಧ್ಯಕ್ಷೆ ತಾಹಿರಾ ಯೂಸುಫ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯೋಜನಾ ಸಮನ್ವಯಾಧಿಕಾರಿ ನಾರಾಯಣ ದೇಲಂಪಾಡಿ ವಿಷಯ ಮಂಡಿಸಿದರು.
ಜಿಲ್ಲಾ ಪಂಚಾಯತ್ ಸದಸ್ಯೆ ಜಮೀಲಾ ಸಿದ್ದೀಕ್, ಪಂಚಾಯತಿ ಉಪಾಧ್ಯಕ್ಷ ನಾಸರ್ ಮೊಗ್ರಾಲ್, ಪಿಟಿಎ ಅಧ್ಯಕ್ಷ ಎ.ಕೆ.ಆರೀಫ್, ಉಪಾಧ್ಯಕ್ಷ ಮೊಯ್ದೀನ್ ಅಜೀಜ್, ಮಾತೃಸಂಘದ ಅಧ್ಯಕ್ಷೆ ವಿನಿಶಾ, ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಕೆ.ವಿ.ಯೂಸುಫ್ ಉಪಸ್ಥಿತರಿದ್ದು ಶುಭ ಹಾರೈಸಿದರು. ಪ್ರಾಂಶುಪಾಲ ದಿವಾಕರನ್ ಸ್ವಾಗತಿಸಿ, ಕಾರ್ತಿಕೇಯನ್ ವಂದಿಸಿದರು.