ಗ್ವಾಲಿಯರ್: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿದ್ದು, ಇದು ಜನರಲ್ಲಿ ಕುತೂಹಲ ಮೂಡಿಸಿದೆ.
ಇಲ್ಲಿನ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಮಗುವಿಗೆ ಜನ್ಮ ನೀಡಿದ್ದಾರೆ.
ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹೆಣ್ಣು ಮಗುವಿನ ತೂಕ ಜನನದ ನಂತರ 2.3 ಕೆ.ಜಿ. ಇದೆ. ಗ್ವಾಲಿಯರ್ನ ಜಯಾರೋಗ್ಯ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷಿಸಿದೆ.
"ಮಗುವಿಗೆ ಜನನದಲ್ಲಿ ನಾಲ್ಕು ಕಾಲುಗಳಿವೆ, ಮಗುವಿಗೆ ದೈಹಿಕ ವಿಕಲತೆ ಇದೆ. ಎರಡು ಹೆಚ್ಚುವರಿ ಕಾಲುಗಳು ನಿಷ್ಕ್ರಿಯವಾಗಿವೆ. ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ವಿಕಾರವಿದೆಯೇ ಎಂದು ಪರಿಶೀಲಿಸುತ್ತಿದ್ದಾರೆ. ಪರೀಕ್ಷೆಯ ನಂತರ ಮಗು ಆರೋಗ್ಯವಾಗಿದ್ದರೆ ನಂತರ ಆ ಹೆಚ್ಚುವರಿ ಕಾಲುಗಳನ್ನು ಶಸ್ತ್ರಚಿಕಿತ್ಸೆಯ ಮೂಲಕ ತೆಗೆದುಹಾಕಲಾಗುತ್ತದೆ. ಇದರಿಂದ ಮಗು ಸಾಮಾನ್ಯ ಜೀವನವನ್ನು ನಡೆಸಬಹುದು" ಎಂದು ಡಾ.ಆರ್.ಕೆ.ಎಸ್.ಧಕಡ್ ಎಎನ್ಐಗೆ ತಿಳಿಸಿದರು.
ಈ ವರ್ಷದ ಮಾರ್ಚ್ನಲ್ಲಿ ಮಧ್ಯಪ್ರದೇಶದ ರತ್ಲಾಮ್ನಲ್ಲಿ ಮಹಿಳೆಯೊಬ್ಬರು ಎರಡು ತಲೆ, ಮೂರು ಕೈಗಳು ಮತ್ತು ಎರಡು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದರು.