ತಿರುವನಂತಪುರ: ಕೇರಳದ ಕೊಚ್ಚಿಯಲ್ಲಿ ಶನಿವಾರ ಬೆಳಗ್ಗೆ ಮಹಿಳೆ ಮೇಲೆ ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾನೆ.
ಕಲೂರಿನ ಆಜಾದ್ ರಸ್ತೆಯಲ್ಲಿ ಈ ಘಟನೆಯ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಸ್ತೆಯಲ್ಲಿ ಇಬ್ಬರು ಮಹಿಳೆಯರೊಂದಿಗೆ ಯುವಕ ವಾಗ್ವಾದ ನಡೆಸುತ್ತಿದ್ದ.
ಬಳಿಕ ಆತ ಮಹಿಳೆ ಮೇಲೆ ಮಚ್ಚಿನಿಂದ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾನೆ. ಸ್ಥಳದಲ್ಲಿದ್ದ ಮತ್ತೊಬ್ಬ ಮಹಿಳೆ ಹಲ್ಲೆ ತಡೆಯಲು ಯತ್ನಸಿದ ಬಳಿಕ ಆತ ಸ್ಥಳದಿಂದ ಪರಾರಿಯಾದ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.
ಹಲ್ಲೆಗೊಳಗಾದ ಮಹಿಳೆಯ ರಕ್ತದ ಮಡುವಿನಲ್ಲಿ ಬಿದ್ದಿರುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ. ಘಟನೆ ಬೆನ್ನಲ್ಲೇ ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಘಟನೆಯ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.