ನವದೆಹಲಿ: 'ನ್ಯೂಸ್ ಹೆಡ್‌ಲೈನ್ಸ್' ಎಂಬ ಯೂಟ್ಯೂಬ್ ಚಾನೆಲ್ ಪ್ರಧಾನಮಂತ್ರಿ ನರೇಂದ್ರ ಮೋದಿ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಚುನಾವಣಾ ಆಯೋಗದ ವಿರುದ್ಧ ಸುಳ್ಳು ಸುದ್ದಿಗಳನ್ನು ಹರಡುತ್ತಿದೆ ಎಂದು ಪ್ರೆಸ್ ಇನ್ಫರ್ಮೇಷನ್ ಬ್ಯೂರೋ (ಪಿಐಬಿ) ಮಂಗಳವಾರ ಹೇಳಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪಿಐಬಿ, "ಸುಮಾರು 10 ಲಕ್ಷ ಚಂದಾದಾರರು ಮತ್ತು 32 ಕೋಟಿ ವೀಕ್ಷಣೆಗಳನ್ನು ಹೊಂದಿರುವ 'ನ್ಯೂಸ್ ಹೆಡ್‌ಲೈನ್ಸ್' ಯೂಟ್ಯೂಬ್ ಚಾನೆಲ್, ಪ್ರಧಾನಿ ಮೋದಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಭಾರತದ ಚುನಾವಣಾ ಆಯೋಗದ ಬಗ್ಗೆ ನಕಲಿ ಸುದ್ದಿಗಳನ್ನು ಪ್ರಚಾರ ಮಾಡುತ್ತಿರುವುದು ಕಂಡುಬಂದಿದೆ ಎಂದು ತಿಳಿಸಿದೆ.
ಯೂಟ್ಯೂಬ್ ಚಾನೆಲ್ "ಭಾರತದ ಮುಖ್ಯ ನ್ಯಾಯಾಧೀಶರ ಆದೇಶ ನೀಡಿದ್ದು, ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆಗಳನ್ನು ನಡೆಸಲಾಗುವುದು" ಎಂಬಂತಹ ನಕಲಿ ಸುದ್ದಿಗಳನ್ನು ಹರಡುತ್ತಿದೆ. ಉತ್ತರ ಪ್ರದೇಶ ವಿಧಾನಸಭೆಯ 131 ಸ್ಥಾನಗಳಿಗೆ ಮರು ಚುನಾವಣೆ ನಡೆಯಲಿದೆ ಎಂಬ ಸುಳ್ಳು ಸುದ್ದಿಯನ್ನೂ ಹಬ್ಬಿಸಿದೆ ಎಂದು ಹೇಳಿದೆ.
ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಿದ್ದಾರೆ ಎಂದೂ ಕೂಡ ಸುದ್ದಿ ಮಾಡಿದೆ ಎಂದು ತಿಳಿಸಿದೆ.