ತಿರುವನಂತಪುರ: ಸ್ವಾಭಿಮಾನದ ವಿಷಯ ಬಂದಾಗ ದೇಶವು ರಾಜಕೀಯವನ್ನು ಬದಿಗಿಟ್ಟು ಒಟ್ಟಾಗಿ ನಿಲ್ಲುತ್ತದೆ, ಇದನ್ನು ಹಿತಶತ್ರುಗಳು ಅರ್ಥಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಟ್ವೀಟ್ ಮಾಡಿದ್ದಾರೆ.
ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ನೀಡಿರುವ ಆಕ್ಷೇಪಾರ್ಹ ಹೇಳಿಕೆಯನ್ನು ಖಂಡಿಸಿದ್ದಾರೆ.
ದೇಶದ ವಿಷಯ ಬಂದಾಗ, ರಾಜಕೀಯ ಬದಿಗಿಟ್ಟು ಒಟ್ಟಾಗಿ ನಿಲ್ಲುತ್ತೇವೆ ಎಂದು ತರೂರ್ ಪಾಕಿಸ್ತಾನಕ್ಕೆ ಕಠಿಣ ಸಂದೇಶ ರವಾನಿಸಿದ್ದಾರೆ.
ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ ಕೂಡ ಶನಿವಾರ ಬಿಲಾವಲ್ ಭುಟ್ಟೊ ಹೇಳಿಕೆಯನ್ನು ಖಂಡಿಸಿದ್ದರು. ಭೂಪೇಶ್ ಬಘೇಲ ಹೇಳಿಕೆಯನ್ನು ಸಮರ್ಥಿಸಿರುವ ಅವರು ಬಿಲಾವಲ್ ಭುಟ್ಟೊ ಹೇಳಿಕೆಯನ್ನು ಕಟುವಾಗಿ ಖಂಡಿಸಿದ್ದಾರೆ.
ಇತ್ತೀಚೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರು ಪಾಕಿಸ್ತಾನ ಭಯೋತ್ಪಾದನೆಗೆ ಬೆಂಬಲ ನೀಡುತ್ತಿದೆ ಎಂದು ಹೇಳಿದ್ದರು. ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪಾಕಿಸ್ತಾನ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ, ಪ್ರಧಾನಿ ನರೇಂದ್ರ ಮೋದಿಯನ್ನು 'ಗುಜರಾತ್‌ನ ಕಟುಕ' ಎಂದು ಹೇಳಿದ್ದರು.
ಈ ವಿಷಯವಾಗಿ ಬಿಲಾವಲ್ ಭುಟ್ಟೊ ವಿರುದ್ಧ ಭಾರತದಲ್ಲಿ ವ್ಯಾಪಕವಾಗಿ ಪ್ರತಿಭಟನೆಗಳು ನಡೆಯುತ್ತಿವೆ.