ನವದೆಹಲಿ: ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತವಾಗಿರುವ ಕಾರಣ ಅನಿವಾರ್ಯವಲ್ಲದ ನಿರ್ಮಾಣ ಕಾಮಗಾರಿಗಳಿಗೆ ನಿಷೇಧ ಹೇರುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗವು ಭಾನುವಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ.
ದೆಹಲಿಯಲ್ಲಿ ಭಾನುವಾರ 24 ಗಂಟೆಗಳ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (ಎಕ್ಯುಐ) 407ರಷ್ಟು ಇತ್ತು.