ಕಾಸರಗೋಡು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಮೂಲ ರಸ್ತೆ, ಸರ್ವಿಸ್ ರಸ್ತೆ, ಮೇಲ್ಸೇತುವೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಈಗಿರುವ ಸಮಸ್ಯೆಗಳ ಕುರಿತು ವರದಿಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಒಪ್ಪಿಸಲು ನಿರ್ಧರಿಸಲಾಗಿದೆ.
ಜಿಲ್ಲಾಧಿಕಾರಿ ಕಚೇರಿ ಮಿನಿ ಕಾನ್ಫರೆನ್ಸ್ ಸಭಾಂಗಣದಲ್ಲಿ ಶಾಸಕರು, ಅಧಿಕಾರಿಗಳು ಸೇರಿದಂತೆ ಜನಪ್ರತಿನಿಧಿಗಳು ಪಾಲ್ಗೊಂಡಿದ್ದ ಪರಿಶೀಲನಾ ಸಭೆಯಲ್ಲಿ ಜಿಲ್ಲೆಯ ವಿವಿಧೆಡೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯ ಅಂಗವಾಗಿ ಸ್ಥಳಾಂತರಿಸಿರುವ ಹೈಮಾಸ್ಟ್ ಮತ್ತು ಲೋಮಾಸ್ಟ್ ದೀಪಗಳನ್ನು ಸ್ಥಳೀಯ ಸಂಸ್ಥೆಗಳು ಸೂಚಿಸಿದ ಸ್ಥಳಗಳಲ್ಲಿ ಮರು ಸ್ಥಾಪಿಸುವಂತೆ ಸಭೆಯಲ್ಲಿ ತೀರ್ಮಾನಿಸಲಾಯಿತು.
ಮೊದಲ ಹಂತದಲ್ಲಿ ಚೆಂಗಳ-ಚಟ್ಟಂಚಾಲ್ ರಸ್ತೆಯಲ್ಲಿ ಸರ್ವಿಸ್ ರಸ್ತೆ ಇಲ್ಲದ ಸಮಸ್ಯೆ ಬಗೆಹರಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಒಳಗೊಂಡ ತಂಡ ಸ್ಥಳದಲ್ಲೇ ಜಂಟಿ ಪರಿಶೀಲನೆ ನಡೆಸಲಿದೆ. ಎಡಿಎಂ ಎ.ಕೆ.ರಾಮೇಂದ್ರನ್ ಸಭೆಯಲ್ಲಿ ಮಾತನಾಡಿ, ಜನರ ಓಡಾಟದ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿರುವ ಅಭಿವೃದ್ಧಿ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ ಮತ್ತು ನಿರ್ಮಾಣ ಕಾಮಗಾರಿಗಳನ್ನು ಪರಿಹರಿಸಿ ನಿರ್ಮಾಣ ಕಾರ್ಯಗಳು ಸಮಾನಾಂತರವಾಗಿ ಮುಂದುವರಿಯಬೇಕು. ಕಾಮಗಾರಿಗೆ ಸಂಬಂಧಿಸಿದ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಅನುμÁ್ಠನ ಸಂಸ್ಥೆಯು ಶೀಘ್ರದಲ್ಲೇ ಸಾರ್ವಜನಿಕ ಪ್ರತಿನಿಧಿಗಳಿಗೆ ಹಸ್ತಾಂತರಿಸಲಿದೆ ಎಂದರು. ವಿವಿಧ ಸಮಸ್ಯೆಗಳ ಕುರಿತು ಕೇಳಿಬಂದಿರುವ ಸಮಸ್ಯೆಗಳನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ರವಾನಿಸಲು ನಿರ್ಧರಿಸಲಾಯಿತು.
ಶಾಸಕರಾದ ಎ.ಕೆ.ಎಂ.ಅಶ್ರಫ್, ಎನ್.ಎ.ನೆಲ್ಲಿಕುನ್ನು, ಸಿ.ಎಚ್.ಕುಂಞಂಬು, ಎಂ.ರಾಜಗೋಪಾಲನ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್, ಉಪಾಧ್ಯಕ್ಷ ಶಾನವಾಸ್ ಪಾದೂರು, ಶಾಸಕ ಇ.ಚಂದ್ರಶೇಖರನ್ ರ ಪ್ರತಿನಿಧಿ ಪದ್ಮನಾಭನ್ ಪೋಟೋರ, ಎ.ಡಿ.ಎಂ.ಕೆ.ರಾಮೇಂದ್ರನ್, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಪುನೀತ್ ಕುಮಾರ್, ವಿವಿಧ ತಾ.ಪಂ ಅಧ್ಯಕ್ಷರು , ರಾಷ್ಟ್ರೀಯ ಹೆದ್ದಾರಿ ನಿರ್ವಹಣಾ ಏಜೆನ್ಸಿಯ ಪ್ರತಿನಿಧಿಗಳು, ಸ್ಥಳೀಯ ಸಂಸ್ಥೆಯ ಅಧಿಕಾರಿಗಳು ಮುಂತಾದವರು ಸಭೆಯಲ್ಲಿ ಭಾಗವಹಿಸಿದ್ದರು.