ತಿರುವನಂತಪುರಂ: ನೈಋತ್ಯ ಬಂಗಾಳಕೊಲ್ಲಿಯಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿದೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 48 ಗಂಟೆಗಳಲ್ಲಿ ವಾಯು ಕುಸಿತ ಒತ್ತಡವು ಪಶ್ಚಿಮ-ನೈಋತ್ಯ ದಿಕ್ಕಿನಲ್ಲಿ ಶ್ರೀಲಂಕಾ ಮೂಲಕ ಕೊಮೊರೊಸ್ ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ. ಇದರ ಪರಿಣಾಮ ಸೋಮವಾರ ಡಿ.26 ರಂದು ದಕ್ಷಿಣ ಕೇರಳದಲ್ಲಿ ಅಲ್ಲಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತೀವ್ರ ವಾಯುಭಾರ ಕುಸಿತ: ಸೋಮವಾರ ಕೇರಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
0
ಡಿಸೆಂಬರ್ 23, 2022