ನವದೆಹಲಿ: ಬಿಜೆಪಿಯ ಪ್ರಮುಖ ಸಾಂಸ್ಥಿಕ ಸಭೆಯು ಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿದ್ದು, ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿಯು ವಿಸ್ತರಣೆಯಾಗುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಡ್ಡಾ ಅವರ ಅಧ್ಯಕ್ಷ ಸ್ಥಾನದ ಅವಧಿ ಮೂರು ವರ್ಷ.ಈ ಅವಧಿ ಮುಂದಿನ ತಿಂಗಳು ಕೊನೆಯಾಗಲಿದೆ.
ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಮುಂಬರಲಿರುವ ರಾಜ್ಯ ವಿಧಾನಸಭಾ ಚುನಾವಣೆಯ ಕಾರ್ಯತಂತ್ರದ ಬಗ್ಗೆ ಚರ್ಚಿಸಲಾಗುವುದು ಹಾಗೂ ಸದ್ಯ ನಡೆಯುತ್ತಿರುವ ಸಂಘಟನಾ ಕಾರ್ಯವನ್ನೂ ಪರಿಶೀಲಿಸಲಾಗುವುದು ಎಂದೂ ಮೂಲಗಳು ಹೇಳಿವೆ.
ಅದರ ಹೊರತಾಗಿಯೂ, ಮುಂಬರುವ ರಾಜ್ಯ ವಿಧಾನಸಭಾ ಮತ್ತು 2024ರ ಲೋಕಸಭಾ ಚುನಾವಣೆಗಳ ದೃಷ್ಟಿಯಿಂದ ಪಕ್ಷದ ಸಾಂಸ್ಥಿಕ ಚುನಾವಣೆಯನ್ನು ಮುಂದೂಡುವುದೇ ಈ ಸಭೆಯ ಉದ್ದೇಶವಾಗಿದೆ. ಲೋಕಸಭಾ ಚುನಾವಣೆ ಪೂರ್ಣವಾದ ಬಳಿಕ ಸಾಂಸ್ಥಿಕ ಚುನಾವಣೆಗಳು ಪ್ರಾರಂಭವಾಗಲಿವೆ ಎಂದೂ ಮೂಲಗಳು ವಿವರಿಸಿವೆ.