ಮಹಾರಾಜ್‌ಗಂಜ್: ಉತ್ತರ ಪ್ರದೇಶದ ಮಹಾರಾಜ್‌ಗಂಜ್‌ನ ಸೊನೌಲಿ
ಪ್ರದೇಶದಲ್ಲಿ ಭಾರತ-ನೇಪಾಳ ಗಡಿಯಲ್ಲಿ ಸುತ್ತಾಡುತ್ತಿದ್ದ ಇಬ್ಬರು ಚೀನಿ ಪ್ರಜೆಗಳನ್ನು
ಸಶಸ್ತ್ರ ಸೀಮಾ ಬಲ(ಎಸ್‌ಎಸ್‌ಬಿ) ಬಂಧಿಸಿದೆ ಎಂದು ಉತ್ತರ ಪ್ರದೇಶ ಪೊಲೀಸರು ಶನಿವಾರ
ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಸಶಸ್ತ್ರ ಸೀಮಾ ಬಲ ಪೊಲೀಸರು ಶುಕ್ರವಾರ ತಡರಾತ್ರಿ ಗಡಿಯಲ್ಲಿ
ವಾಡಿಕೆಯಂತೆ ತಪಾಸಣೆ ನಡೆಸುತ್ತಿದ್ದ ವೇಳೆ ಇಬ್ಬರು ವಿದೇಶಿ ಪ್ರಜೆಗಳನ್ನು ವಶಕ್ಕೆ
ಪಡೆದಿದ್ದಾರೆ.
ವಿದೇಶಿಗರು ಈ ಪ್ರದೇಶಕ್ಕೆ ಭೇಟಿ ನೀಡಿದ ಕಾರಣವನ್ನು ಕೇಳಲಾಯಿತು. ಆದರೆ ಅವರು ಸರಿಯಾಗಿ ಉತ್ತರ ನೀಡದ ಕಾರಣ ಅವರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಗುಪ್ತಚರ ಸಂಸ್ಥೆಗಳು ಇಬ್ಬರನ್ನು ವಿಚಾರಣೆ ನಡೆಸುತ್ತಿವೆ ಎಂದು ಸೋನೌಲಿ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಅಭಿಷೇಕ್ ಸಿಂಗ್ ಹೇಳಿದ್ದಾರೆ.
"ಬಂಧಿತ ಇಬ್ಬರು ಝೆಂಗ್ ಯಿಂಗ್ಜುನ್(50) ಮತ್ತು ಸಾಂಗ್ ಹುಯಿ(52) ಹೆಸರಿನಲ್ಲಿ ಚೀನಾ ಗಣರಾಜ್ಯದ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದಾರೆ. ಭಾರತ ಪ್ರವೇಶಿಸಲು ಅವರ ವೀಸಾ ಅವಧಿಯೂ ಮುಗಿದಿದೆ. ಅವರು ಈ ಹಿಂದೆ ಹಲವಾರು ಬಾರಿ ಭಾರತಕ್ಕೆ ಭೇಟಿ ನೀಡಿದ್ದಾರೆ" ಎಂದು ಅವರು ತಿಳಿಸಿದ್ದಾರೆ.