ಮುಂಬೈ: ಗೋವಾದ ಧಾರ್ಗಲ್‌ನಲ್ಲಿ ಅಖಿಲ ಭಾರತ ಆಯುರ್ವೇದ ಸಂಸ್ಥೆಯನ್ನು (ಎಐಐಎ) ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಉದ್ಘಾಟಿಸಿದರು.
ವಿಶ್ವ ಆಯುರ್ವೇದ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಂದಿರುವ ಪ್ರಧಾನಿ ಅವರು ಸಂಸ್ಥೆಯನ್ನು ಉದ್ಘಾಟಿಸಿದರು.ಈ ಸಮ್ಮೇಳನದಲ್ಲಿ 50 ದೇಶಗಳ ಪ್ರತಿನಿಧಿಗಳು ಪಾಲ್ಗೊಂಡಿದ್ದಾರೆ.
ಪ್ರಧಾನಿ
ಅವರು ಬಳಿಕ ಗೋವಾದ ಮೋಪಾದಲ್ಲಿ ನಿರ್ಮಿಸಲಾಗಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ
ಮೊದಲ ಹಂತವನ್ನು ಉದ್ಘಾಟಿಸಿದರು. ಈ ವಿಮಾನನಿಲ್ದಾಣಕ್ಕೆ ಮನೋಹರ್ ಪರಿಕ್ಕರ್ ಅವರ
ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಗೋವಾದಲ್ಲಿ ಕೇವಲ 50 ಕಿ.ಮೀ.ಅಂತರದಲ್ಲಿ
ಎರಡು ಅಂತರರಾಷ್ಟ್ರೀಯ ವಿಮಾನನಿಲ್ದಾಣಗಳು ತಲೆ ಎತ್ತಿದಂತಾಗಿದೆ.