ಲಖನೌ: ವಿಶ್ವಪ್ರಸಿದ್ಧ ಪ್ರವಾಸಿ ತಾಣ ತಾಜ್ ಮಹಲ್‌ಗೆ ಭೇಟಿ ನೀಡಬಯಸುವ ಪ್ರವಾಸಿಗರು ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು ಎಂದು ಉತ್ತರ ಪ್ರದೇಶ ಸರ್ಕಾರ ಗುರುವಾರ ಸೂಚಿಸಿದೆ.
ಅಲ್ಲದೆ, ರಾಜ್ಯದಲ್ಲಿ ಮುನ್ನೆಚ್ಚರಿಕಾ ಡೋಸ್ ಪ್ರಮಾಣವನ್ನು ಹೆಚ್ಚಿಸುವಂತೆಯೂ ಅಲ್ಲಿನ ಸರ್ಕಾರವು ಆರೋಗ್ಯಾಧಿಕಾರಿಗಳಿಗೆ ಹೇಳಿದೆ.