ಕಾಸರಗೋಡು: ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಕಾಸರಗೋಡು ವತಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ-2022, ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ ಡಿ. 11ರಂದು ಬೆಳಗ್ಗೆ 10.30ಕ್ಕೆ ಕಾಸರಗೋಡು ಹೊಸ ಬಸ್‍ನಿಲ್ದಾಣ ಸನಿಹದ ಕಾಸರಗೋಡು ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ಜರುಗಲಿದೆ. ಈ ಸಂದರ್ಭ ವಿವಿಧ ವಲಯಗಳಲ್ಲಿ ಸೇವೆ ಸಲ್ಲಿಸುತ್ತಿರುವ ಒಂಬತ್ತು ಮಂದಿ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡುವರು. ಕರ್ನಾಟಕ ವಿಧಾನಪರಿಷತ್ ಪ್ರತಿಪಕ್ಷ ಮುಖಂಡ ಬಿ.ಕೆ ಹರಿಪ್ರಸಾದ್ ಸಮಾರಂಭ ಉದ್ಘಾಟಿಸುವರು. ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿ ಸಂಸ್ಥಾಪಕ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷತೆ ವಹಿಸುವರು. ಕಾಸರಗೋಡು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಹಾಗೂ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ಶಂಕರ್ ಪಾಗೋಜಿ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡುವರು. ಶಾಸಕರಾದ ಸಿ.ಎಚ್. ಕುಞಂಬು, ಎನ್.ಎ ನೆಲ್ಲಿಕುನ್ನು, ಎ.ಕೆ.ಎಂ ಅಶ್ರಫ್, ಧಾರ್ಮಿಕ-ಸಾಮಾಜಿಕ ಮುಖಂಡ ರವೀಶ ತಂತ್ರಿ ಕುಂಟಾರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಈ ಸಂದರ್ಭ ಕನಕದಾಸ ಪ್ರಶಸ್ತಿ ಪುರಸ್ಕøತ ಹರಿದಾಸ ಜಯಾನಂದ ಕುಮಾರ್ ಹೊಸದುರ್ಗ ಹಾಗೂ ಕೇರಳ ತುಳು ಅಕಾಡಮಿ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಆರ್.ಜಯಾನಂದ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಗುವುದು.
ಗಡಿನಾಡ ಸಾಹಿತ್ಯ ಸಾಂಸ್ಕøತಿಕ ಅಕಾಡಮಿಯಿಂದ ಗಡಿನಾಡ ಕನ್ನಡ ರಾಜ್ಯೋತ್ಸವ, ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
0
ಡಿಸೆಂಬರ್ 04, 2022
Tags