ಕೋಲ್ಕತ: ಪಶ್ಚಿಮ ಬಂಗಾಳದ ಹೌರಾ ರೈಲ್ವೇ ನಿಲ್ದಾಣದಲ್ಲಿ ಶುಕ್ರವಾರ ನಡೆದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಉದ್ಘಾಟನೆ ಕಾರ್ಯಕ್ರಮದ ವೇದಿಕೆಗೆ ಏರಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಿಸಿದರು.
ಹೌರಾದಿಂದ ನ್ಯೂ ಜಲಪಾಯಿಗುರಿಗೆ ಸಂಚರಿಸುವ ನೂತನ ರೈಲನ್ನು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಆಗಿ ಉದ್ಘಾಟಿಸಿದರು.