ಲಾರ್ನಾಕಾ : ವಿಶ್ವಸಂಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುವ ಭಾರತೀಯ ಶಾಂತಿಪಾಲಕರ ಕಾರ್ಯವನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಶನಿವಾರ ಶ್ಲಾಘಿಸಿದರು.
ಜನರಲ್ ಕೆ.ಎಸ್. ತಿಮ್ಮಯ್ಯ ಅವರ ಹೆಸರಿಟ್ಟಿರುವ ಸೈಪ್ರಸ್‌ನ ಬೀದಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಭಾರತದ ಶಾಂತಿಪಾಲಕರ ಕೆಲಸವು ಪ್ರಪಂಚದಾದ್ಯಂತ ಮೆಚ್ಚುಗೆಗೆ ಪಾತ್ರವಾಗಿದೆ ಎಂದೂ ಹೇಳಿದ್ದಾರೆ.