ಚೆನ್ನೈ: ಮಕ್ಕಳ ಅಶ್ಲೀಲ ಚಿತ್ರಗಳ ವೆಬ್‌ಸೈಟ್ ನಡೆಸುತ್ತಿದ್ದ ಅನಿವಾಸಿ ಭಾರತೀಯ(ಎನ್ಆರ್ಐ) ರಾಜ ಸುಬ್ರಮಣಿಯನ್ ಆಲಿಯಾಸ್ ಸ್ಯಾಮ್ ಜಾನ್ಸ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ಸದ್ಯ ರಾಜ ಸುಬ್ರಮಣಿಯನ್ ಜರ್ಮನಿಯಲ್ಲಿ ತಲೆಮರೆಸಿಕೊಂಡಿದ್ದಾನೆ.
ತಮಿಳುನಾಡಿನ ತಿರುಚ್ಚಿಯಲ್ಲಿರುವ ಆತನ ಮನೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳು, ಹಾರ್ಡ್ ಡಿಸ್ಕ್, ಲ್ಯಾಪ್ಟಾಪ್ ಮತ್ತು ಮೊಬೈಲ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಜರ್ಮನಿಯ ಗುಪ್ತಚರದಳದ ಅಧಿಕಾರಿಗಳ ನೆರವಿನೊಂದಿಗೆ ಸಿಬಿಐ ಅಧಿಕಾರಿಗಳು ಈ ದಾಳಿ ಮಾಡಿದ್ದಾರೆ. ಹಾಗೂ ರಾಜ ಸುಬ್ರಮಣಿಯನ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದಾರೆ.
ರಾಜ ಸುಬ್ರಮಣಿಯನ್ ಜರ್ಮನಿಯಲ್ಲಿ ತಲೆ ಮರೆಸಿಕೊಂಡಿದ್ದಾನೆ. ಈ ಬಗ್ಗೆ ಜರ್ಮನಿ ಪೊಲೀಸರಿಗೂ ಮಾಹಿತಿ ನೀಡಲಾಗಿದೆ ಎಂದು ಸಿಬಿಐ ಅಧಿಕಾರಿಗಳು ಹೇಳಿದ್ದಾರೆ.