ಮಲಪ್ಪುರಂ: ಮಲಪ್ಪುರಂ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ದಡಾರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಈ ಆದೇಶ ಹೊರಡಿಸಿದ್ದಾರೆ.
ದಡಾರದ ಚಿಕಿತ್ಸೆ ಕುರಿತು ಸುಳ್ಳು ಪ್ರಚಾರ ಮಾಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಮಲಪ್ಪುರಂ ಜಿಲ್ಲೆಯ ಅಂಗನವಾಡಿಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗಿದೆ. ಇದೇ ವೇಳೆ ದಡಾರಕ್ಕೆ ಚಿಕಿತ್ಸೆ ಇಲ್ಲ ಎಂಬ ಸುಳ್ಳು ಪ್ರಚಾರ ನಡೆದಿದೆ. ಈ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಆದೇಶಿಸಿದರು.
ಈ ಹಿಂದೆ ತಿರೂರ್ ಮತ್ತು ಮಲಪ್ಪುರಂ ಉಪಜಿಲ್ಲೆಗಳಲ್ಲಿ ವಿದ್ಯಾರ್ಥಿಗಳು ಮಾಸ್ಕ್ ಧರಿಸಬೇಕೆಂದು ಸಲಹೆ ನೀಡಲಾಗಿತ್ತು. ಆದರೆ ಮತ್ತೆ ರೋಗ ಹರಡಿದ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.
ಮಲಪ್ಪುರಂ ಜಿಲ್ಲೆಯಲ್ಲಿ 5 ವರ್ಷದೊಳಗಿನ 89,000 ಮಕ್ಕಳಿಗೆ ಲಸಿಕೆ ಹಾಕಿಲ್ಲ ಎಂದು ತಿಳಿದುಬಂದಿದೆ. ವ್ಯಾಕ್ಸಿನೇಷನ್ ಹಾಕಿಸದಿರುವ ಪ್ರದೇಶಗಳಲ್ಲಿ ದಡಾರ ಹೆಚ್ಚಾಗಿ ವರದಿಯಾಗಿದೆ. ಜಿಲ್ಲೆಯಲ್ಲಿ ಲಸಿಕೆ ವಿರುದ್ಧ ವ್ಯಾಪಕ ಆಂದೋಲನ ನಡೆದಿದೆ. ನಂತರ ಜಿಲ್ಲಾಧಿಕಾರಿ ಧಾರ್ಮಿಕ ಸಂಘಟನೆಗಳ ಪ್ರತಿನಿಧಿಗಳನ್ನು ಕರೆಸಿ ಸಭೆ ನಡೆಸಿದರು.
ಮಲಪ್ಪುರಂ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಸ್ಕ್ ಧರಿಸಲು ಆದೇಶ: ಜಿಲ್ಲಾಧಿಕಾರಿಗಳಿಂದ ಸೂಚನೆ
0
ಡಿಸೆಂಬರ್ 07, 2022