ಸಮರಸ ಚಿತ್ರಸುದ್ದಿ: ಬದಿಯಡ್ಕ: ಬಡಗುಶಬರಿಮಲೆ ಉಬ್ರಂಗಳ ಶ್ರೀ ಮಹಾದೇವ ಪಾರ್ವತಿ ಶ್ರೀ ಶಾಸ್ತಾರ ದೇವಸ್ಥಾನದ ಬ್ರಹ್ಮಕಲಶೋತ್ಸವದ 4ನೇ ದಿನ ಸಂಜೆ ಅನುಜ್ಞಾಬಲಿ, ಅನುಜ್ಞಾ ಪ್ರಾರ್ಥನೆ ನಡೆಯಿತು. ಬ್ರಹ್ಮಶ್ರೀ ದೇಲಂಪಾಡಿ ಗಣೇಶ ತಂತ್ರಿಗಳು ಹಾಗೂ ಬ್ರಹ್ಮಶ್ರೀ ರವೀಶ ತಂತ್ರಿ ಕುಂಟಾರು ಊರಪರವೂರ ನೂರಾರು ಭಕ್ತಾದಿಗಳ ಪಾಲ್ಗೊಳ್ಳುವಿಕೆಯೊಂದಿಗೆ ಪ್ರಾರ್ಥನೆ ನೆರವೇರಿಸಿದರು. ಶ್ರೀಕ್ಷೇತ್ರಕ್ಕೆ ವಿವಿಧೆಡೆಗಳಿಂದ ಭಕ್ತಾದಿಗಳು ಆಗಮಿಸುತ್ತಿದ್ದು, ಅನೇಕ ಧಾರ್ಮಿಕ ಕ್ಷೇತ್ರಗಳಿಂದ ಹಸಿರುವಾಣಿ ಹರಿದುಬರುತ್ತಿದೆ.
ಉಬ್ರಂಗಳದಲ್ಲಿ ಅನುಜ್ಞಾಬಲಿ, ಪ್ರಾರ್ಥನೆ
0
ಡಿಸೆಂಬರ್ 30, 2022