ಮುಳ್ಳೇರಿಯ: ಕೇರಳ ರಾಜ್ಯ ಯುವ ಕಲ್ಯಾಣ ಮಂಡಳಿ ಆಶ್ರಯದಲ್ಲಿ ಕಾಸರಗೋಡು ಜಿಲ್ಲಾ ಪಂಚಾಯತ್ ಕೇರಳೋತ್ಸವ ಮತ್ತು ಅಥ್ಲೆಟಿಕ್ಸ್ ಸ್ಪರ್ಧೆಯು ನೀಲೇಶ್ವರ ಇಎಂಎಸ್ ಕ್ರೀಡಾಂಗಣದಲ್ಲಿ ನಡೆಯಿತು. ಲ್ಯಾಟಿಕ್ಸ್‍ನಲ್ಲಿ ಕಾರಡ್ಕ ಬ್ಲಾಕ್ 120 ಅಂಕಗಳನ್ನು ಗಳಿಸಿ ಚಾಂಪಿಯನ್ ಗಳಿಸಿತು.
ಮಂಜೇಶ್ವರ ಬ್ಲಾಕ್ 95 ಅಂಕಗಳೊಂದಿಗೆ ದ್ವಿತೀಯ ಹಾಗೂ ಕಾಸರಗೋಡು ಬ್ಲಾಕ್ 76 ಅಂಕಗಳೊಂದಿಗೆ ತೃತೀಯ ಸ್ಥಾನ ಗಳಿಸಿತು. ಸ್ಪರ್ಧೆಗಳಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಸಿ. ಜೆ. ಸಜಿತ್ ಉದ್ಘಾಟಿಸಿದರು.ನೀಲೇಶ್ವರ ನಗರಸಭೆ ಉಪಾಧ್ಯಕ್ಷ ಪಿ. ಪಿ.ಮುಹಮ್ಮದ್ ರಫಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಯುವ ಸಮನ್ವಯಾಧಿಕಾರಿ ಎ. ವಿ. ಶಿವಪ್ರಸಾದ್, ನೀಲೇಶ್ವರ ನಗರಸಭಾ ಸದಸ್ಯೆ ವಿ.ವಿ.ಶ್ರೀಜಾ, ಜಿಲ್ಲಾ ಕ್ರೀಡಾ ಮಂಡಳಿ ಉಪಾಧ್ಯಕ್ಷ ಪಿ. ಪ. ಅಶೋಕನ್, ಜಿಲ್ಲಾ ಕ್ರೀಡಾ ಮಂಡಳಿ ಕಾರ್ಯದರ್ಶಿ ಎಸ್. ಸುಧೀಪ್ ಬೋಸ್ ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಸಮಾರೋಪ ಸಾರ್ವಜನಿಕ ಸಭೆ ಹಾಗೂ ಬಹುಮಾನ ವಿತರಣೆ ಉದ್ಘಾಟಿಸಿದರು. ಮಾಜಿ ಸಂಸದ ಪಿ. ಕರುಣಾಕರನ್, ಕಾಞಂಗಾಡ್ ಡಿವೈಎಸ್ಪಿ ಬಾಲಕೃಷ್ಣನ್ ನಾಯರ್, ಸ್ಪೋಟ್ರ್ಸ್ ಕೌನ್ಸಿಲ್ ಕಾರ್ಯಕಾರಿ ಸಮಿತಿ ಸದಸ್ಯ ಅನಿಲ್ ಬಂಗಳಂ, ಜಿಲ್ಲಾ ಪಂಚಾಯಿತಿ ಲೋಕೋಪಯೋಗಿ ಸ್ಥಾಯಿ ಸಮಿತಿ ಅಧ್ಯಕ್ಷೆ ಕೆ.ಶಕುಂತಳಾ ಮಾತನಾಡಿದರು. ಸಮಾರಂಭದಲ್ಲಿ ರಾಜ್ಯ ಶಾಲಾ ಕ್ರೀಡಾಕೂಟದಲ್ಲಿ ಚಿನ್ನದ ಪದಕ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಜಿಲ್ಲಾ ಕೇರಳೋತ್ಸವ ಅಥ್ಲೆಟಿಕ್ಸ್: ಕಾರಡ್ಕ ಬ್ಲಾಕ್ ಪ್ರಥಮ
0
ಡಿಸೆಂಬರ್ 13, 2022