ನವದೆಹಲಿ: ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜನರು ಹಸಿವಿನಿಂದ ಮೃತಪಟ್ಟ ವರದಿ ಇಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಲೋಕಸಭೆಯಲ್ಲಿ ಮಾಹಿತಿ ನೀಡಿದೆ.
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕೇಂದ್ರ ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು, ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ವಾಸ್ತವ ಸ್ಥಿತಿಯನ್ನು ಸರಿಯಾಗಿ ತಿಳಿಸಿಲ್ಲ ಎಂದು ಹೇಳಿದರು.