ಕಾಸರಗೋಡು: ನ್ಯೂಯಾರ್ಕ್‍ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರನ್ನು ಅವಮಾನಿಸಿದ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಪ್ರತಿಕೃತಿ ದಹಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.
ರಾಷ್ಟ್ರೀಯ ಮಟ್ಟದಲ್ಲಿ ಕರೆ ನೀಡಿರುವ ಪ್ರತಿಭಟನಾ ಕಾರ್ಯಕ್ರಮಗಳ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಆಯೋಜಿಸಲಾಗಿತ್ತು. ಬಿಜೆಪಿ ರಾಜ್ಯ ಸಮಿತಿ ಕಾರ್ಯದರ್ಶಿ ವಕೀಲ ಪ್ರಕಾಶ್ ಬಾಬು ಧರಣಿ ಉದ್ಘಾಟಿಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ರವೀಶ ತಂತ್ರಿ ಕುಂಟಾರು ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಬಿಜೆಪಿ ರಾಜ್ಯ ಪರಿಷತ್ ಸದಸ್ಯ ಎನ್. ಸತೀಶನ್, ಕಾಸರಗೋಡು ಮಂಡಲ ಸಮಿತಿ ಅಧ್ಯಕ್ಷೆ ಪ್ರಮೀಳಾ ಮಜಲ್, ಪ್ರಧಾನ ಕಾರ್ಯದರ್ಶಿ ಸುಕುಮಾರ್ ಕುದುರೆಪಾಡಿ, ಕಾರ್ಯದರ್ಶಿ ಅಶೋಕನ್ ಚೆಟ್ಟಿಯಾರ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು, ಯುವ ಮೋರ್ಚಾ ರಾಜ್ಯ ಸಂಚಾಲಕಿ ಅಂಜು ಜೋಸ್ಟಿ, ಬಿಜೆಪಿ ಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಸ್ವಾಗತಿಸಿದರು. ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಎಂ. ಉಮಾ ವಂದಿಸಿದರು.
ಭಾರತದ ಪ್ರಧಾನಿಗೆ ಅವಮಾನ: ಬಿಜೆಪಿಯಿಂದ ಪಾಕ್ ಸಚಿವನ ಪ್ರತಿಕೃತಿ ದಹನ
0
ಡಿಸೆಂಬರ್ 18, 2022
Tags