ಕಾಸರಗೋಡು: ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ವೈದ್ಯಕೀಯ ಶಿಬಿರದಲ್ಲಿ ಭಾಗವಹಿಸಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿಸೆಂಬರ್ 31ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆಯು ಜಿಲ್ಲೆಯ ಎಲ್ಲಾ ಅಕ್ಷಯ ಕೇಂದ್ರಗಳಲ್ಲಿ ಲಭ್ಯವಿದ್ದು, ಆಧಾರ್, ಪಡಿತರ ಚೀಟಿ, ವೈದ್ಯಕೀಯ ದಾಖಲೆಗಳು ಮತ್ತು ವೈದ್ಯಕೀಯ ಅರ್ಜಿಯನ್ನು ಭರ್ತಿ ಮಾಡುವ ಮೂಲಕಬೋರ್ಡ್ ಯಾ ಸದಸ್ಯತ್ವ ಪ್ರಮಾಣಪತ್ರದ ಪ್ರತಿಯೊಂದಿಗೆ ಆಯಾ ಪಂಚಾಯಿತಿ ಅಧೀನದ ಸರ್ಕಾರಿ ಆಸ್ಪತ್ರೆಗಳಿಗೆ (ಸಿಎಚ್‍ಸಿ, ಪಿಎಚ್‍ಸಿ, ಎಚ್‍ಎಸ್‍ಸಿ, ತಾಲೂಕು ಆಸ್ಪತ್ರೆ) ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಮೀಪದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. ಈ ಹಿಂದೆ ಜಿಲ್ಲಾಧಿಕಾರಿ, ರಾಷ್ಟ್ರೀಯ ಆರೋಗ್ಯ ಮಿಷನ್ ಕಚೇರಿ ಹಾಗೂ ಇತರೆ ಆರೋಗ್ಯ ಸಂಸ್ಥೆಗಳಿಗೆ ಅರ್ಜಿ ಸಲ್ಲಿಸಿದವರು ಹೊಸ ಮಾದರಿಯ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ತಮ್ಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಗಳಿಗೆ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.
ಎಂಡೋಸಲ್ಫಾನ್ ವೈದ್ಯಕೀಯ ತಪಾಸಣೆ: ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
0
ಡಿಸೆಂಬರ್ 21, 2022