ನವದೆಹಲಿ: ಚೀನಾ ಸೇರಿದಂತೆ ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಮಹಾಮಾರಿ ಕೊರೋನಾ ವೈರಸ್ ಉಲ್ಬಣಗೊಂಡಿದ್ದು, ಇದನ್ನು ಗಮನದಲ್ಲಿಟ್ಟುಕೊಂಡು ಚೀನಾ ಸೇರಿದಂತೆ ಇತರ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ಪ್ರಯಾಣಿಕರಿಗೆ ವಿಮಾನ ನಿಲ್ದಾಣಗಳಲ್ಲಿ ಮತ್ತೆ ಕೋವಿಡ್ ಪರೀಕ್ಷೆ ನಡೆಸಲಾಗುವುದು ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.
ದೇಶದಲ್ಲಿನ ಕೋವಿಡ್ ಪರಿಸ್ಥಿತಿಯನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಸಭೆಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ.
"ಚೀನಾ ಸೇರಿದಂತೆ ವಿವಿಧ ದೇಶಗಳಿಂದ ಆಗಮಿಸುವ ಅಂತರರಾಷ್ಟ್ರೀಯ ವಿಮಾನ ಪ್ರಯಾಣಿಕರಿಗೆ ರ್‍ಯಾಂಡಮ್ ಸ್ಯಾಂಪಲ್ ಪರೀಕ್ಷೆ ಮಾಡಲಾಗುತ್ತದೆ" ಎಂದು ಮೂಲಗಳು ತಿಳಿಸಿವೆ.
ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಮಾಂಡವಿಯಾ ಅವರು, ದೇಶದಲ್ಲಿ ಕೋವಿಡ್ ಇನ್ನೂ ಮುಗಿದಿಲ್ಲ. "ಸಂಬಂಧಿತ ಎಲ್ಲರಿಗೂ ಎಚ್ಚರಿಕೆ ನೀಡುವಂತೆ ಮತ್ತು ಕಣ್ಗಾವಲು ಹೆಚ್ಚಿಸುವಂತೆ ನಾನು ಸೂಚಿಸಿದ್ದೇನೆ. ಯಾವುದೇ ಪರಿಸ್ಥಿತಿಯನ್ನು ನಿರ್ವಹಿಸಲು ನಾವು ಸಿದ್ಧರಿದ್ದೇವೆ ಎಂದು ಹೇಳಿದ್ದಾರೆ.