ನವದೆಹಲಿ: 'ಧಾರ್ಮಿಕ ಸ್ವಾತಂತ್ರ್ಯವು ಜನರನ್ನು ಮತಾಂತರಗೊಳಿಸುವ ಹಕ್ಕನ್ನು ಒಳಗೊಂಡಿಲ್ಲ' ಎಂದು ಗುಜರಾತ್ ಸರ್ಕಾರವು ಸುಪ್ರೀಂಕೋರ್ಟ್‌ಗೆ ತಿಳಿಸಿದೆ.
ವಿವಾಹ ಮೂಲಕ ಮತಾಂತರಗೊಳಿಸುವುದಕ್ಕೂ ಮುನ್ನ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರ ಅನುಮತಿ ಪಡೆಯುವುದು ಕಡ್ಡಾಯ.
ಕಾಯ್ದೆಯ ಈ ನಿಯಮಕ್ಕೆ ಗುಜರಾತ್ ಹೈಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವುಗೊಳಿಸಬೇಕು ಎಂದು ರಾಜ್ಯ ಸರ್ಕಾರ ಮನವಿ ಮಾಡಿದೆ.
ಗುಜರಾತ್ ಹೈಕೋರ್ಟ್ ಕಳೆದ ವರ್ಷ ಆಗಸ್ಟ್ 19 ಹಾಗೂ 26ರಂದು ಆದೇಶ ಹೊರಡಿಸಿ, ಗುಜರಾತ್ ಸರ್ಕಾರ ಜಾರಿಗೆ ತಂದಿದ್ದ ಧಾರ್ಮಿಕ ಸ್ವಾತಂತ್ರ್ಯ ಕಾಯ್ದೆ, 2003ರ ಸೆಕ್ಷನ್ 5ಕ್ಕೆ ತಡೆ ನೀಡಿತ್ತು.
ವಕೀಲ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿರುವ ಪಿಐಎಲ್‌ಗೆ ಪ್ರತಿಕ್ರಿಯೆಯಾಗಿ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಗುಜರಾತ್ ಸರ್ಕಾರ ಈ ವಿಷಯ ತಿಳಿಸಿದೆ.
'ತಡೆಯನ್ನು ಕೂಡಲೇ ತೆರವುಗೊಳಿಸಬೇಕು. ಬಲವಂತದಿಂದ, ಆಮಿಷವೊಡ್ಡಿ ಅಥವಾ ವಂಚನೆ ಮೂಲಕ ಮತಾಂತರಗೊಳಿಸುವುದನ್ನು ನಿಷೇಧಿಸುವ ಸಂಬಂಧ ರೂಪಿಸಿರುವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಇದರಿಂದ ಸಾಧ್ಯವಾಗಲಿದೆ' ಎಂದು ಸರ್ಕಾರ ಅಫಿಡವಿಟ್‌ನಲ್ಲಿ ವಿವರಿಸಿದೆ.