ಇಡುಕ್ಕಿ: ಸಣ್ಣ ಸಣ್ಣ ಕಾರಣಗಳಿಗೂ ಹದಿ ಹರೆಯದವರು ಸಾವಿನ ಹಾದಿ ಹಿಡಿಯುತ್ತಿರುವುದು ತುಂಬಾ ಕಳವಳಕಾರಿಯಾಗಿದೆ. ಅದರಲ್ಲೂ ಈ ಮೊಬೈಲ್ ಯುಗದಲ್ಲಿ ಇಂತಹ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪಾಲಕರು ತಮ್ಮ ಮಕ್ಕಳ ಮೇಲೆ ಹೆಚ್ಚಿನ ನಿಗಾವಹಿಸಬೇಕಿದೆ.
ಇಲ್ಲದಿದ್ದರೆ ಅನಾಹುತಗಳಿಗೆ ಎಡೆ ಮಾಡಿಕೊಟ್ಟಂತಾಗುತ್ತದೆ.
ಕೇರಳದಲ್ಲಿ 15 ವರ್ಷದ ವಿದ್ಯಾರ್ಥಿನಿ ಮನೆಯ ಸಮೀಪದ ಮರವೊಂದಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಈ ಘಟನೆ ಇಡುಕ್ಕಿ ಜಿಲ್ಲೆಯ ಕನ್ನಂಪಾಡಿಯಲ್ಲಿ ನಡೆದಿದೆ. ಕ್ಷುಲಕ ಕಾರಣಕ್ಕೆ ಬಾಲಕಿ ಸಾವಿಗೆ ಶರಣಾಗಿದ್ದಾಳೆ. ಮೃತಳನ್ನು ದೇವು ಎಂದು ಗುರುತಿಸಲಾಗಿದೆ. ಈಕೆ ಕನ್ನಂಪಾಡಿ ನಿವಾಸಿ ಅಜು ಎಂಬುವರ ಮಗಳು. ದೇವು 10ನೇ ತರಗತಿ ವಿದ್ಯಾರ್ಥಿನಿ.
ತನ್ನ ಶಾಲಾ ಸಹಪಾಠಿ ಹುಡುಗನಿಗೆ ದೇವು ವಾಟ್ಸ್ಆಯಪ್ನಲ್ಲಿ ಮೆಸೇಜ್ ಮಾಡುತ್ತಿರುವುದನ್ನು ಗಮನಿಸಿದ ಪಾಲಕರು, ಆಕೆಗೆ ಬೈದು ಬುದ್ಧಿ ಹೇಳಿದ್ದರು. ಇಷ್ಟಕ್ಕೆ ಮನನೊಂದುಕೊಂಡ ದೇವು ಮನೆಯ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡಿದ್ದಾಳೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.