HEALTH TIPS

ದೇಶಕ್ಕಾಗಿ ಒಂದು ನಾಯಿಯನ್ನೂ ಕೂಡ ಕಳೆದುಕೊಂಡಿಲ್ಲ? ಹೇಳಿಕೆ: ಖರ್ಗೆ ವಿರುದ್ಧ ಬಿಜೆಪಿ ಕಿಡಿ, ಕ್ಷಮೆಗೆ ಆಗ್ರಹ, ಸಂಸತ್ತಿನಲ್ಲಿ ತೀವ್ರ ಗದ್ದಲ

 

              ನವದೆಹಲಿ: ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ ಎಂಬ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆ ಸಂಸತ್ತಿನಲ್ಲಿ ಮಂಗಳವಾರ ತೀವ್ರ ಗದ್ದಲವನ್ನು ಸೃಷ್ಟಿಸಿದೆ.

    ರಾಜಸ್ಥಾನದ ಅಲ್ವಾರ್‌ನಲ್ಲಿ ಭಾರತ್ ಜೋಡೋ ಯಾತ್ರೆಯ ಭಾಗವಾಗಿ ನಡೆದ ರ್ಯಾಲಿಯಲ್ಲಿ ಮಾತನಾಡಿದ್ದ ಖರ್ಗೆ ಅವರು, ಕಾಂಗ್ರೆಸ್ ದೇಶಕ್ಕಾಗಿ ಕೆಲಸ ಮಾಡಿದೆ. ಸ್ವಾತಂತ್ರ್ಯ ಪಡೆಯಲು ಸಹಾಯ ಮಾಡಿದೆ. ನಮ್ಮ ನಾಯಕರು ಪ್ರಾಣ ತ್ಯಾಗ ಮಾಡಿದ್ದಾರೆ. ಆದರೆ ಬಿಜೆಪಿ ನಾಯಕರು ದೇಶಕ್ಕಾಗಿ ಒಂದು "ನಾಯಿಯನ್ನು ಸಹ ಕಳೆದುಕೊಂಡಿಲ್ಲ" ಎಂದು ಎಂದು ವಾಗ್ದಾಳಿ ನಡೆಸಿದ್ದರು.

              ಈ ಹೇಳಿಕೆಯನ್ನು ಇಂದು ಸಂಸತ್ತಿನಲ್ಲಿ ಉಭಯ ಸದನಗಳಲ್ಲಿ ಪ್ರಸ್ತಾಪಿಸಿದ ಬಿಜೆಪಿ ನಾಯಕರು ಖರ್ಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದರು.

                   ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ನಾವು ಖಂಡಿಸುತ್ತೇವೆ. ಆಕ್ಷೇಪಾರ್ಹ ಭಾಷೆ ಬಳಸುವ ಮೂಲಕ ಸುಳ್ಳು ಹರಡಲು ಪ್ರಯತ್ನಿಸಿದ್ದಾರೆ. ಅಲ್ವಾರ್ ನಲ್ಲಿ ಆಕ್ಷೇಪಾರ್ಹ ಭಾಷೆ ಬಳಸಿದ್ದಕ್ಕಾಗಿ ಅವರು ಕ್ಷಮೆಯಾಚಿಸಬೇಕು ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ರಾಜ್ಯಸಭೆಯಲ್ಲಿ ಆಗ್ರಹಿಸಿದರು.

                     ಇದರಂತೆ ಖರ್ಗೆಯವರು ಹೇಳಿಕೆ ತೀವ್ರ ಗದ್ದಲಕ್ಕೆ ಕಾರಣವಾಯಿತು. ಈ ವೇಳೆ ಮಾತನಾಡಿದ ಉಪರಾಷ್ಟ್ರಪತಿ ಮತ್ತು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನಕರ್ ಅವರು, ಸಂಸತ್ತಿನ ಹೊರಗೆ ಈ ಹೇಳಿಕೆಯನ್ನು ನೀಡಲಾಗಿದೆ ಎಂದು ಹೇಳಿದರು.

ದೇಶದ 135 ಕೋಟಿ ಜನರು ನಮ್ಮನ್ನು ಗಮನಿಸುತ್ತಿದ್ದಾರೆ. ಯಾರೋ ಹೊರಗೆ ಏನೋ ಹೇಳಿರಬಹುದು... ನೀವು ಮಕ್ಕಳಲ್ಲ ಎಂದು ಹೇಳಿದರು.

           ಈ ವೇಳೆ ಬಿಜೆಪಿ ಆಗ್ರಹವನ್ನು ಖರ್ಗೆಯವರು ವ್ಯಂಗ್ಯವಾಡಿದರು. ನಾನು ಇಲ್ಲಿ ಆ ಹೇಳಿಕೆಯನ್ನು ಪುನರಾವರ್ತಿಸಿದರೆ, ಅವರಿಗೆ (ಬಿಜೆಪಿ) ತುಂಬಾ ಕಷ್ಟವಾಗುತ್ತದೆ, ಏಕೆಂದರೆ ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಕ್ಷಮೆಯಾಚಿಸಿದವರು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ಕ್ಷಮೆಯಾಚಿಸಲು ಕೇಳುತ್ತಿದ್ದಾರೆ. ಕಾಂಗ್ರೆಸ್ ‘ಭಾರತ ತೋಡೊ (ವಿಭಜಿತ ಭಾರತ) ಯಾತ್ರೆ’ ನಡೆಸುತ್ತಿದೆ. ಯಾತ್ರೆ ವೇಳೆ ನಾನು ಹೇಳಿಕೆ ನೀಡಿದ್ದೆ. ಕಾಂಗ್ರೆಸ್ ಯಾವಾಗಲೂ ಭಾರತ್ ಜೋಡೋ (ಭಾರತವನ್ನು ಒಂದುಗೂಡಿಸುವ) ಮೇಲೆ ಕೆಲಸ ಮಾಡಿದೆ. ಇದಕ್ಕಾಗಿ ಇಂದಿರಾಗಾಂಧಿ, ರಾಜೀವ್ ಗಾಂಧಿ ಪ್ರಾಣ ಕೊಟ್ಟರು. ನೀವು ಏನು ಮಾಡಿದ್ದೀರಿ? ದೇಶಕ್ಕಾಗಿ ಯಾರು ತ್ಯಾಗ ಮಾಡಿದ್ದಾರೆಂದು ನಿಮಗೆ ತಿಳಿದಿದೆ ಎಂದು ತಿಳಿಸಿದರು.

                ಈ ಹೇಳಿಕೆಗೆ ತಿರುಗೇಟು ನೀಡಿದ ಪಿಯೂಷ್ ಗೋಯಲ್ ಅವರು, ಅವರಿಗೆ ಅವರ ಇತಿಹಾಸ ನೆನಪಿಲ್ಲ ಎಂದು ನಾನು ಭಾವಿಸುತ್ತೇನೆ. ಕಾಂಗ್ರೆಸ್‌ನಿಂದಾಗಿ ಜಮ್ಮು-ಕಾಶ್ಮೀರ ಯಾವ ಸ್ಥಿತಿಯಲ್ಲಿತ್ತು, ಪಾಕಿಸ್ತಾನದ ಬೆದರಿಕೆ, ಚೀನಾದ ಆಕ್ರಮಣ, ಬಿ.ಆರ್.ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಅವಮಾನ ಇವರಿಗೆ ನೆನಪಿಲ್ಲ ಎಂದರು.


 

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries