HEALTH TIPS

ಕೊಯಮತ್ತೂರು ಕಾರು ಸ್ಫೋಟ ಪ್ರಕರಣ: ಎನ್‌ಐಎ ಅಧಿಕಾರಿಗಳಿಂದ ಮೂವರ ಬಂಧನ

 

             ಚೆನ್ನೈ: ಕೊಯಮತ್ತೂರು ಕಾರು ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬುಧವಾರ ವಶಕ್ಕೆ ಪಡೆದಿದ್ದಾರೆ.

      ಬಂಧಿತರನ್ನು ಉಮರ್ ಫಾರೂಕ್ (39), ಮೊಹಮ್ಮದ್ ತೌಫಿಕ್ (25) ಮತ್ತು ಫಿರೋಜ್ ಖಾನ್ (28) ಎಂದು ಗುರುತಿಸಲಾಗಿದೆ.

                 ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ದಾಖಲಿಸಿಕೊಂಡಿರುವ ಎನ್‌ಐಎ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ.


                  ಅಕ್ಟೋಬರ್ 23ರಂದು ಕೊಯಮತ್ತೂರಿನ ಉಕ್ಕಡಂ ದೇವಾಲಯದ ಬಳಿ ಕಾರಿನಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಅದರಲ್ಲಿದ್ದ ಜಮೀಶ್ ಮುಬೀನ್ ಎಂಬಾತ ಮೃತಪಟ್ಟಿದ್ದ. ಘಟನೆಯಲ್ಲಿ ಮುಬೀನ್ ನಂಟು ಹಾಗೂ ಭಯೋತ್ಪಾದನಾ ಕೃತ್ಯದ ಸಂಚು ಕುರಿತಾಗಿ ತನಿಖೆ ನಡೆಸಲಾಗುತ್ತಿದೆ.

            ತಮಿಳುನಾಡು ಸರ್ಕಾರದ ಶಿಫಾರಸಿನಂತೆ ಅಕ್ಟೋಬರ್ 27ರಂದು ಪ್ರಕರಣವನ್ನು ಕೇಂದ್ರ ಸರ್ಕಾರವು ಎನ್‌ಐಎಗೆ ವರ್ಗಾಯಿಸಿತ್ತು.

                  ಪ್ರಕರಣಕ್ಕೆ ಸಂಬಂಧಿಸಿ ಈವರಗೆ ಒಂಬತ್ತು ಮಂದಿಯನ್ನು ಬಂಧಿಸಿದ್ದು, ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಫೋಟದಲ್ಲಿ ಸಾವನ್ನಪ್ಪಿದ್ದ ಜೆಮಿಶಾ ಮುಬಿನ್ ಜೊತೆ ನಂಟು ಹೊಂದಿರುವ ಆರೋಪದಲ್ಲಿ ಹಲವರನ್ನು ಬಂಧಿಸಲಾಗಿದೆ ಎನ್‌ಐಎ ಅಧಿಕಾರಿಗಳು ತಿಳಿಸಿದ್ದಾರೆ.
Official
Tamil Nadu | NIA officials have arrested three more persons - Umar Farooq, Thoufiq and Feroz Khan- in connection with the Coimbatore car blast case
2.8K
Reply
Copy link

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries