ನವದೆಹಲಿ: ಗಡಿಯಲ್ಲಿ ಚೀನಾ ಅತಿಕ್ರಮಣ ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ವಿರೋಧ ಪಕ್ಷಗಳು ಸದನದಿಂದ ಹೊರನಡೆದವು.
ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ನಿಯಮ 267 ರ ಅಡಿಯಲ್ಲಿ ಎಲ್ಲಾ ಒಂಬತ್ತು ನೋಟಿಸ್‌ಗಳು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಿದರು.
ಆದಾಗ್ಯೂ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ತಮ್ಮ ಬೇಡಿಕೆಯನ್ನು ಸಭಾಪತಿಗಳ ಮುಂದಿಟ್ಟು, ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಲೇ ಇದ್ದವು.
ಆದರೆ, ಸಭಾಪತಿಗಳು ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್, ಎಡಪಕ್ಷಗಳು, ಡಿಎಂಕೆ ಮತ್ತು ಇತರ ಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.