ಇಂದೋರ್: ಮಧ್ಯಪ್ರದೇಶದ ಇಂದೋರ್ ನಗರದ ದೇವಾಲಯದ ಆವರಣದಲ್ಲಿರುವ "ಶಿವಲಿಂಗ" ದ ಮುಂದೆ ಅಶ್ಲೀಲ ಕೃತ್ಯಗಳಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ 30 ವರ್ಷದ ವ್ಯಕ್ತಿಯನ್ನು ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಸೋಮವಾರ ತಿಳಿಸಿದ್ದಾರೆ.
ರಾಜ್ಯ ಗೃಹ ಸಚಿವ ನರೋತ್ತಮ್ ಮಿಶ್ರಾ ಈ ವ್ಯಕ್ತಿಯ ವರ್ತನೆ ಅತ್ಯಂತ ಖಂಡನೀಯ ಎಂದು ಬಣ್ಣಿಸಿದ್ದಾರೆ.
ವಾಸಿಂ ಅಲಿಯಾಸ್ ಘಂಟಿ (30) ಶುಕ್ರವಾರ ವಿಶ್ವೇಶ್ವರ ಮಹಾದೇವ ದೇವಸ್ಥಾನದ ಗರ್ಭಗುಡಿಯಲ್ಲಿ ಶಿವಲಿಂಗದ ಮುಂದೆ ಅಶ್ಲೀಲ ಕೃತ್ಯಗಳಲ್ಲಿ ತೊಡಗಿದ್ದು, ಆವರಣದಲ್ಲಿ ಅಳವಡಿಸಲಾಗಿರುವ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ಸಂಯೋಗಿತಗಂಜ್ ಪೊಲೀಸ್ ಠಾಣೆಯ ಪ್ರಭಾರಿ ತಹಜೀಬ್ ಖಾಜಿ ತಿಳಿಸಿದ್ದಾರೆ.
ನಗರದಲ್ಲಿ ಟೈರ್ ರಿಪೇರಿ ಅಂಗಡಿ ನಡೆಸುತ್ತಿರುವ ಆರೋಪಿಯನ್ನು ಎನ್ ಎಸ್ ಎ ಅಡಿಯಲ್ಲಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ .
ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 295 (ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಉದ್ದೇಶದಿಂದ ಪೂಜಾ ಸ್ಥಳವನ್ನು ಅಪವಿತ್ರಗೊಳಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.