ನವದೆಹಲಿ: ತ್ರಿಪುರ, ನಾಗಾಲ್ಯಾಂಡ್ ಹಾಗೂ ಮೇಘಾಲಯ ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕವನ್ನು ಬುಧವಾರ ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ.
ಫೆಬ್ರುವರಿ 16ರಂದು ತ್ರಿಪುರ, ಫೆಬ್ರುವರಿ 27ರಂದು ನಾಗಾಲ್ಯಾಂಡ್ ಮತ್ತು ಮೇಘಾಲಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.
ಮಾರ್ಚ್ 2ರಂದು ಮೂರು ರಾಜ್ಯಗಳು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ನಾಗಾಲ್ಯಾಂಡ್, ತ್ರಿಪುರ ಮತ್ತು ಮೇಘಾಲಯ ರಾಜ್ಯಗಳ ಸರ್ಕಾರ ಅವಧಿಯು ಕ್ರಮವಾಗಿ 2023ರ ಮಾರ್ಚ್ 12, ಮಾರ್ಚ್ 15 ಮತ್ತು ಮಾರ್ಚ್ 22ರಂದು ಪೂರ್ಣಗೊಳ್ಳಲಿದೆ.
ಪ್ರತಿ ರಾಜ್ಯದಲ್ಲಿ 60 ವಿಧಾನಸಭೆ ಕ್ಷೇತ್ರಗಳಿಗೆ ಚುನಾವಣೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ.
ನಾಗಾಲ್ಯಾಂಡ್, ಮೇಘಾಲಯ ಮತ್ತು ತ್ರಿಪುರಾದಲ್ಲಿ ಒಟ್ಟು 62.8 ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ ಎಂದು ರಾಜೀವ್ ಕುಮಾರ್ ಮಾಹಿತಿ ನೀಡಿದ್ದಾರೆ.
Voting for Assembly elections in Tripura to be held on February 16 & in Nagaland & Meghalaya on February 27; results to be declared on March 2.
#AssemblyElections2023
@ANI
Voting for Assembly elections in Tripura to be held on February 16 & in Nagaland & Meghalaya on February 27; results to be declared on March 2.
#AssemblyElections2023