ರಾಯ್ ಪುರ: ಎರಡನೇ ಏಕದಿನ ಪಂದ್ಯದಲ್ಲಿ ಭಾರತದ ಬೌಲರ್‌ಗಳ ದಾಳಿಗೆ ನ್ಯೂಜಿಲೆಂಡ್ ತಂಡ ಸಂಪೂರ್ಣ ಜರ್ಜರಿತವಾಗಿದ್ದು ಪ್ರವಾಸಿ ತಂಡ 108 ರನ್‌ಗಳಿಗೆ ಆಲೌಟ್ ಆಗಿದೆ.
ಮೊದಲ ಓವರ್‌ನಿಂದಲೇ ನ್ಯೂಜಿಲೆಂಡ್ ಬ್ಯಾಟ್ಸ್‌ಮನ್‌ಗಳ ಮೇಲೆ ಭಾರತದ ಬೌಲರ್‌ಗಳು ಪ್ರಾಬಲ್ಯ ಮೆರೆದರು. ಅಂತಿಮವಾಗಿ ಇಡೀ ತಂಡವು 34.2 ಓವರ್‌ಗಳಲ್ಲಿ 108 ರನ್‌ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ಭಾರತಕ್ಕೆ 109 ರನ್‌ಗಳ ಗುರಿ ಸಿಕ್ಕಿತು.
ಮೊಹಮ್ಮದ್ ಶಮಿ ಭಾರತದ ಅತ್ಯಂತ ಯಶಸ್ವಿ ಬೌಲರ್ ಎನಿಸಿಕೊಂಡಿದ್ದು. 6 ಓವರ್ ಗಳಲ್ಲಿ 18 ರನ್ ನೀಡಿ ಮೂರು ವಿಕೆಟ್ ಪಡೆದರು. ನ್ಯೂಜಿಲೆಂಡ್‌ಗೆ ಶಮಿ ಮೊದಲ ಹೊಡೆತ ನೀಡಿದರು. ಈ ಹಿನ್ನಡೆ ಬಳಿಕ ಕಿವೀಸ್ ತಂಡಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ಹಾರ್ದಿಕ್ ಪಾಂಡ್ಯ ಮತ್ತು ವಾಷಿಂಗ್ಟನ್ ಸುಂದರ್ ತಲಾ ಎರಡು ವಿಕೆಟ್ ಪಡೆದರು. ಅದೇ ಸಮಯದಲ್ಲಿ ಎಲ್ಲಾ ಮೂರು ಬೌಲರ್‌ಗಳಾದ ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್ ಮತ್ತು ಶಾರ್ದೂಲ್ ಠಾಕೂರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮತ್ತೊಂದೆಡೆ, ನ್ಯೂಜಿಲೆಂಡ್‌ನ ಬ್ಯಾಟಿಂಗ್ ಪಡೆ ಸ್ಥಿತಿ ತುಂಬಾ ಕೆಟ್ಟದಾಗಿತ್ತು. ಟಾಪ್-5 ಬ್ಯಾಟ್ಸ್‌ಮನ್‌ಗಳಲ್ಲಿ ಯಾರೂ ಎರಡಂಕಿ ಮುಟ್ಟಲು ಸಾಧ್ಯವಾಗಲಿಲ್ಲ. ನ್ಯೂಜಿಲೆಂಡ್ ಪರ ಗ್ಲೆನ್ ಫಿಲಿಪ್ಸ್ 36 ಅತಿ ಹೆಚ್ಚು ರನ್ ಗಳಿಸಿದ್ದಾರೆ.
ಭಾರತ ತಂಡ ಮತ್ತು ನ್ಯೂಜಿಲೆಂಡ್ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಎರಡನೇ ಪಂದ್ಯ ರಾಯ್‌ಪುರದಲ್ಲಿ ನಡೆಯುತ್ತಿದೆ. ಭಾರತ ತಂಡದ ನಾಯಕ ರೋಹಿತ್ ಶರ್ಮಾ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು. ಇಂದಿನ ಪಂದ್ಯದಲ್ಲಿ ಭಾರತ ಗೆದ್ದರೆ 2-0 ಅಂತರದಲ್ಲಿ ಸರಣಿ ವಶಪಡಿಸಿಕೊಳ್ಳಲಿದೆ.
ಈ ಸರಣಿಯ ಮೊದಲ ಏಕದಿನ ಪಂದ್ಯ ಹೈದರಾಬಾದ್‌ನಲ್ಲಿ ನಡೆದಿದ್ದು, ಇದರಲ್ಲಿ ಟೀಂ ಇಂಡಿಯಾ 12 ರನ್‌ಗಳ ರೋಚಕ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಆರಂಭಿಕ ಆಟಗಾರ ಶುಭಮನ್ ಗಿಲ್ 208 ರನ್‌ಗಳ ದ್ವಿಶತಕ ಇನಿಂಗ್ಸ್ ಆಡಿದರು.