HEALTH TIPS

ಜ.30, 31ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಬ್ಯಾಂಕ್ ನೌಕರರ ಸಂಘಟನೆಗಳ ಒಕ್ಕೂಟ

          ವದೆಹಲಿ: ಐದು ದಿನಗಳ ಕೆಲಸದ ಅವಧಿ, ಸುಧಾರಿತ ಪಿಂಚಣಿ ವ್ಯವಸ್ಥೆ, ವೇತನ ಪರಿಷ್ಕರಣೆಗೆ ಚಾಲನೆ ಹಾಗೂ ಎಲ್ಲ ಹಂತದ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆಯನ್ನು ಶುರು ಮಾಡುವಂತೆ ಒತ್ತಾಯಿಸಿ, ಒಂಬತ್ತು ಬ್ಯಾಂಕ್ ಸಂಘಟನೆಗಳ ಒಕ್ಕೂಟವಾದ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು (The United Forum of Bank Unions) ಜನವರಿ 30, 31ರಂದು ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿದೆ ಎಂದು thewire.in ವರದಿ ಮಾಡಿದೆ.

                ಇದರೊಂದಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಹಿಂಪಡೆಯುವಂತೆಯೂ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆ ಆಗ್ರಹಿಸಿದೆ.

             ಈ ಕುರಿತು Business Standard ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯ ಭಾಗವಾದ ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ಎಚ್.ವೆಂಕಟಾಚಲಂ, ಭಾರತೀಯ ಬ್ಯಾಂಕ್‌ಗಳ ಒಕ್ಕೂಟಕ್ಕೆ ಹಲವು ಬಾರಿ ಪತ್ರ ಬರೆದರೂ ನಮ್ಮ ಬೇಡಿಕೆಗಳನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದ್ದಾರೆ.

               ಇದಕ್ಕೂ ಮುನ್ನ ಮಾರ್ಚ್ 2021ರಲ್ಲಿ ಬ್ಯಾಂಕ್ ಸಂಘಟನೆಗಳ ಒಕ್ಕೂಟ ವೇದಿಕೆಯು ಕೊನೆಯ ಬಾರಿ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರಕ್ಕೆ ಕರೆ ನೀಡಿತ್ತು. ವೆಂಕಟಾಚಲಂ ಪ್ರಕಾರ, ಈ ಮುಷ್ಕರದಲ್ಲಿ ಸುಮಾರು 10 ಲಕ್ಷ ಬ್ಯಾಂಕ್ ನೌಕರರು ಹಾಗೂ ಅಧಿಕಾರಿಗಳು ಭಾಗವಹಿಸಿದ್ದರು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries