ತಿರುವನಂತಪುರಂ: ತಿರುವನಂತಪುರಂನಿಂದ ಒಮನ್‌ನ ಮಸ್ಕತ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ, ಟೇಕ್ ಆಫ್ ಆದ ಕೆಲವೇ ಕ್ಷಣಗಳಲ್ಲಿ ಅದರ ಆನ್‌ಬೋರ್ಡ್ ಕಂಪ್ಯೂಟರ್ ಸಿಸ್ಟಮ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನಲೆಯಲ್ಲಿ ವಾಪಸ್ ಆಗಿದೆ.
ಐಎಕ್ಸ್ 549 ವಿಮಾನವು ಕೇರಳದ ರಾಜಧಾನಿಯಿಂದ ಇಂದು ಬೆಳಗ್ಗೆ 8.30 ಕ್ಕೆ ಟೇಕ್ ಆಫ್ ಆಗಿದ್ದು, ಪೈಲಟ್‌ಗಳಲ್ಲಿ ಒಬ್ಬರು ತಾಂತ್ರಿಕ ದೋಷವನ್ನು ಗಮನಿಸಿದ ನಂತರ 9.17ಕ್ಕೆ ಇಲ್ಲಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರಳಿದೆ.
"ಎಲ್ಲಾ 105 ಪ್ರಯಾಣಿಕರು ಮತ್ತು ಕ್ಯಾಬಿನ್ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ" ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ತಿಳಿಸಿದ್ದಾರೆ.
ವಿಮಾನಯಾನ ಸಂಸ್ಥೆಯು ಪ್ರಯಾಣಿಕರಿಗೆ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದೆ ಮತ್ತು ಆ ವಿಮಾನ ಮಧ್ಯಾಹ್ನ 1 ಗಂಟೆಗೆ ಇಲ್ಲಿಂದ ಟೇಕ್ ಆಫ್ ಆಗುವ ನಿರೀಕ್ಷೆ ಇದೆ ಎಂದು ಅವರು ಹೇಳಿದ್ದಾರೆ.
ಎಲ್ಲಾ ಪ್ರಯಾಣಿಕರನ್ನು ಚೆನ್ನಾಗಿ ನೋಡಿಕೊಳ್ಳಲಾಗುತ್ತಿದೆ ಎಂದು ಸಹ ಅವರು ತಿಳಿಸಿದ್ದಾರೆ.