ತ್ರಿಶೂರ್: ಇಕ್ಕಟ್ಟಾದ ರಸ್ತೆಯಲ್ಲಿ ಮತ್ತೊಂದು ವಾಹನಕ್ಕೆ ದಾರಿ ನೀಡಲಿಲ್ಲ ಎಂಬ ಕಾರಣಕ್ಕೆ ಕೆಲವು ವ್ಯಕ್ತಿಗಳು ಮಲಯಾಳಂ ನಟ ಸುನೀಲ್ ಸುಗಧರ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಗಳೊಂದಿಗೆ ಮಾತಿನ ಚಕಮಕಿ ನಡೆಸಿ, ಅವರ ಮೇಲೆ ಹಲ್ಲೆ ನಡೆಸಿರುವ ಘಟನೆ ರವಿವಾರ ತ್ರಿಶೂರ್ ಬಳಿ ನಡೆದಿದೆ.
ಹೀಗಿದ್ದೂ ನಟ ಸುನೀಲ್ ಸುಗಧ ಕಾರಿನಲ್ಲಿ ಪ್ರಯಾಣಿಸುತ್ತಿರಲಿಲ್ಲ. ಆದರೆ, ಲಘು ಚಕಮಕಿ ನಡೆದ ಸಂದರ್ಭದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ನಾಟಕ ಕಲಾವಿದರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು PTI ಸುದ್ದಿ ಸಂಸ್ಥೆಗೆ ಪ್ರತಿಕ್ರಿಯಿಸಿರುವ ಪೊಲೀಸರು, "ದೂರಿನ ಕುರಿತು ಪರಿಶೀಲಿಸಲಾಗುತ್ತಿದೆ. ಘಟನೆಯು ಸಂಜೆ ವೇಳೆ ಸಂಭವಿಸಿದ್ದು, ಪ್ರಾಥಮಿಕ ಮಾಹಿತಿ ವರದಿ ಇನ್ನಷ್ಟೇ ದಾಖಲಾಗಬೇಕಿದೆ" ಎಂದು ಮಾಹಿತಿ ನೀಡಿದ್ದಾರೆ.
ಸುಗಧ ಮತ್ತು ಇತರ ಕಲಾವಿದರು ನಾಟಕದ ತಾಲೀಮು ನಡೆಸಲು ಆ ಪ್ರದೇಶಕ್ಕೆ ತೆರಳಿದ್ದರು. ಈ ನಡುವೆ, ದಾಳಿ ಘಟನೆಗೆ ಸಂಬಂಧಿಸಿದ ವಿಡಿಯೊವನ್ನು ಪ್ರಾದೇಶಿಕ ಸುದ್ದಿ ವಾಹಿನಿಗಳು ಬಿತ್ತರಿಸಿವೆ.