ಮಂಜೇಶ್ವರ: ಕಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ
ಶಾಲೆಯಲ್ಲಿ 74ನೇ ಗಣರಾಜ್ಯೋತ್ಸವ ಆಚರಿಸಲಾಯಿತು.
ಮೀಂಜ ಗ್ರಾಮ ಪಂಚಾಯತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಾಬು ಕುಳೂರು ಧ್ವಜಾರೋಹಣಗೈದರು. ಶಾಲಾ ಸಂಚಾಲಕ ವಂದನೀಯ ಫಾ.ಪಾವ್ಲ್ ಸಿಕ್ವೇರಾ ಅಧ್ಯಕ್ಷತೆ ವಹಿಸಿ ಸಂದೇಶ ನೀಡಿದರು. ಪಿಟಿಎ, ಎಂ.ಪಿಟಿಎ ಅಧ್ಯಕ್ಷರು, ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಕೋಶಾಧಿಕಾರಿ, ವಿದ್ಯಾರ್ಥಿಗಳು, ಶಿಕ್ಷಕರು ಭಾಗವಹಿಸಿದ್ದರು.