ಕಾಸರಗೋಡು: ಜಿಲ್ಲಾ ಪಂಚಾಯಿತಿ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ವಿಭಾಗದ ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳಿಗೆ ಪ್ರಸಕ್ತ ಆರ್ಥಿಕ ವರ್ಷದ ಎಸ್‍ಸಿಎಸ್‍ಪಿ ಯೋಜನೆಗಾಗಿ ಮಾರ್ಗದೀಪಮ್ 'ವೃತ್ತಿ ಮಾರ್ಗದರ್ಶನ ಕಾರ್ಯಾಗಾರ' ಆಯೋಜಿಸಲಾಗಿತ್ತು. ಜಿಲ್ಲಾ ಸೇವಾ ಸಹಕಾರಿ ಬ್ಯಾಂಕ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬೇಬಿ ಬಾಲಕೃಷ್ಣನ್ ಉದ್ಘಾಟಿಸಿದರು. ಕಲ್ಯಾಣ ಸ್ಥಾಯಿ ಸಮಿತಿ ಅಧ್ಯಕ್ಷ ಶಿನೋಜ್ ಚಾಕೋ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳು ವೃತ್ತಿಪರವಾಗಿ ಮತ್ತು ಸಾಮಾಜಿಕವಾಗಿ ಹೊಸ ಎತ್ತರವನ್ನು ತಲುಪಲು ಸಹಾಯ ಮಾಡುವ ಉದ್ದೇಶದಿಂದ ತರಗತಿಯನ್ನು ಆಯೋಜಿಸಲಾಗಿತ್ತು.
ಖ್ಯಾತ ವೃತ್ತಿ ಮಾರ್ಗದರ್ಶನ ತಜ್ಞ ಶ್ರೀಕುಮಾರ್ ಪಲ್ಲಿಯಾಟ್ ತರಗತಿ ನಡೆಸಿದರು. ‘ಮನಸ್ಸು ತೆರೆದು ನಗುಮೊಗದಿಂದ ಪರೀಕ್ಷೆ ಎದುರಿಸಿ’ ಎಂಬ ವಿಷಯದ ಮೇಲೆ ಕಾರ್ಯಾಗಾರ ಆಯೋಜಿಸಲಾಗಿತ್ತು. ಚೆರ್ಕಳ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಸಂಚಾಲಕ ವಿನೋದ್ ಕುಮಾರ್, ಪರಪ್ಪ ಎಸ್ಸಿ ಅಭಿವೃದ್ಧಿ ಅಧಿಕಾರಿ ಕೆ.ಸುಕನ್ಯಾ ಮಾತನಾಡಿದರು. ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ಎಸ್.ಮೀನಾರಾಣಿ ಸ್ವಾಗತಿಸಿ, ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಕಚೇರಿಯ ಸಂಪನ್ಮೂಲ ಸಹಾಯಕ ಟಿ.ಸಿ.ಸುರೇಶ್ ವಂದಿಸಿದರು. ಜಿಲ್ಲೆಯ ವಿವಿಧ ಶಾಲೆಗಳ ಸುಮಾರು 125 ಮಕ್ಕಳು ಮತ್ತು ಅವರ ಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
‘ಮಾರ್ಗದೀಪ’: ವೃತ್ತಿ ಮಾರ್ಗದರ್ಶನ ಕಾರ್ಯಾಗಾರ
0
ಜನವರಿ 28, 2023