ನವದೆಹಲಿ
:ನ್ಯಾಯಮೂರ್ತಿಗಳ ನೇಮಕವನ್ನು ನಿರ್ಧರಿಸುವ ಸುಪ್ರೀಂ ಕೋರ್ಟ್ ಕೊಲಿಜಿಯಂ ಸರಕಾರದ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂದು ಸಲಹೆ ನೀಡಿ ಕಾನೂನು ಸಚಿವ ಕಿರಣ್ ರಿಜಿಜು ಅವರು ಭಾರತದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸುಪ್ರೀಂ ಕೋರ್ಟ್‌ನ ಉನ್ನತ ನ್ಯಾಯಾಧೀಶರ ಸಮಿತಿಯು ಪಾರದರ್ಶಕತೆ ಹಾಗೂ ಸಾರ್ವಜನಿಕ ಹೊಣೆಗಾರಿಕೆಯನ್ನು ಹೊಂದಿರಲು ಸರಕಾರಿ ಪ್ರತಿನಿಧಿಗಳನ್ನು ಒಳಗೊಂಡಿರಬೇಕು ಎಂದು ಕಾನೂನು ಸಚಿವರು ಪತ್ರದಲ್ಲಿ ಬರೆದಿದ್ದಾರೆ. ಈ ಪತ್ರವು ಸರಕಾರ ಹಾಗೂ ನ್ಯಾಯಾಂಗದ ನಡುವೆ ನಡೆಯುತ್ತಿರುವ ಹಗ್ಗ-ಜಗ್ಗಾಟವನ್ನು ಹೆಚ್ಚಿಸಲಿದೆ.
ರಾಜ್ಯದ ಪ್ರತಿನಿಧಿಗಳು ಹೈಕೋರ್ಟ್ ಕೊಲಿಜಿಯಂನ ಭಾಗವಾಗಿರಬೇಕು ಎಂದು ರಿಜಿಜು ಹೇಳಿದ್ದಾರೆ.