ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಹೊಣೆ ಹೊತ್ತಿರುವ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಕುರಿತ ಮಾಹಿತಿ ಒದಗಿಸುವಂತೆ ಸೂಚಿಸಿದ್ದ ಕೇಂದ್ರ ಮಾಹಿತಿ ಆಯೋಗದ (ಸಿಐಸಿ) ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿದೆ.
ಮುಂದಿನ ವಿಚಾರಣೆಯವರೆಗೆ ಕೇಂದ್ರೀಯ ಸಾರ್ವಜನಿಕ ಮಾಹಿತಿ ಅಧಿಕಾರಿ (ಸಿಪಿಐಒ) ಮತ್ತು ಕೇಂದ್ರೀಯ ನೇರ ತೆರಿಗೆ ಮಂಡಳಿಗೆ (ಸಿಬಿಡಿಟಿ) ವಿರುದ್ಧ ಯಾವುದೇ ಬಲವಂತದ ಕ್ರಮ ತೆಗೆದುಕೊಳ್ಳುವಂತಿಲ್ಲ ಎಂದು ನ್ಯಾಯಮೂರ್ತಿ ಪ್ರತಿಭಾ ಎಂ. ಸಿಂಗ್ ಸೂಚಿಸಿದರು.