ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ (ನರೇಗಾ) ದುಡಿಯುವ ಕಾರ್ಮಿಕರು ಮೊಬೈಲ್ ಆಯಪ್ ಮೂಲಕ ತಮ್ಮ ಹಾಜರಿ ನಮೂದಿಸಬೇಕು ಎಂಬ ಕೇಂದ್ರದ ನಡೆಯನ್ನು ಕಾಂಗ್ರೆಸ್ ಬುಧವಾರ ವಿರೋಧಿಸಿದೆ.
ಇಂಥ ಕ್ರಮದ ಹಿಂದೆ, ನರೇಗಾ ಯೋಜನೆಗೆ ಬಜೆಟ್‌ನಲ್ಲಿ ಮೀಸಲಿಡುವ ಅನುದಾನವನ್ನು ಕಡಿತಗೊಳಿಸುವ ಉದ್ದೇಶ ಇದೆ ಎಂದು ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಆರೋಪಿಸಿದ್ದಾರೆ.