ತಿರುವನಂತಪುರ: ಕೇರಳ ತನ್ನ ಬ್ಯಾಂಕಿಂಗ್ ಸೇವೆಯಲ್ಲಿ ಸಂಪೂರ್ಣ ಡಿಜಿಟಲ್ ಆಗಿರುವ ದೇಶದ ಮೊದಲ ರಾಜ್ಯ ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ Chief Minister Pinarayi Vijayan ಶನಿವಾರ ಘೋಷಿಸಿದರು. ಈ ಮಾನ್ಯತೆ ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸುತ್ತದೆ ಎಂದು ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು ಹೇಳಿದ್ದಾರೆ.
ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಹಾಗೂ ತಾಂತ್ರಿಕ ಪ್ರಗತಿಯೊಂದಿಗೆ ಸ್ಥಳೀಯ ಸ್ವ-ಸರಕಾರಿ ಸಂಸ್ಥೆಗಳ ಮೂಲಕ ಸಾಮಾಜಿಕ ಮಧ್ಯಸ್ಥಿಕೆಗಳಿಂದ ಈ ಸಾಧನೆ ಸಾಧ್ಯವಾಗಿದೆ ಎಂದು ವಿಜಯನ್ ಹೇಳಿದರು.
"ಇದರ ಹಿಂದೆ ಕೆಲಸ ಮಾಡಿದ ಪ್ರತಿಯೊಬ್ಬರನ್ನು ನಾನು ಅಭಿನಂದಿಸುತ್ತೇನೆ ಹಾಗೂ ಕೇರಳವನ್ನು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಬ್ಯಾಂಕಿಂಗ್ ರಾಜ್ಯ ಎಂದು ಘೋಷಿಸಲು ಬಯಸುತ್ತೇನೆ" ಎಂದು ವಿಜಯನ್ ಹೇಳಿದರು.
ಈ ಸಂದರ್ಭದಲ್ಲಿ ಡಿಜಿಟಲ್ ಕ್ಷೇತ್ರದ ಪ್ರಗತಿಗಾಗಿ ಕೇರಳವು ಇಂದು ಮೂರು 'ಡಿಜಿಟಲ್ ಇಂಡಿಯಾ' ಪ್ರಶಸ್ತಿಗಳನ್ನು ಸ್ವೀಕರಿಸಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಕೇರಳ ಫೈಬರ್ ಆಪ್ಟಿಕ್ ನೆಟ್‌ವರ್ಕ್ (ಕೆಎಫ್‌ಒಎನ್) ಯೋಜನೆಯು ಬಹುತೇಕ ಶೇಕಡಾ 90 ರಷ್ಟು ಪೂರ್ಣಗೊಂಡಿದೆ. ಇದು ಡಿಜಿಟಲ್ ವಿಭಜನೆಯನ್ನು ಕಡಿಮೆ ಮಾಡುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.