ಕಾಸರಗೋಡು: ಸ್ವಾಮಿ ವಿವೇಕಾನಂದ ಅವರ ಆದರ್ಶ ಪಾಲಿಸಿಕೊಂಡು ವಿದ್ಯಾರ್ಥಿಗಳಿಗೆ ಬೋಧಿಸುವ ಮೂಲಕ ಸಾಮಾಜಿಕ ಪರಿವರ್ತನೆಗೆ ನಾಂದಿಹಾಡಬೇಕು ಎಂದು ದೇಶೀಯ ಅಧ್ಯಾಪಕ ಪರಿಷತ್ (ಎನ್‍ಟಿಯು)ರಾಜ್ಯ ಸಮಿತಿ ಕಾರ್ಯದರ್ಶಿ ಪ್ರಭಾಕರ ನಾಯರ್ ತಿಳಿಸಿದ್ದಾರೆ.
ಅವರು ಎನ್‍ಟಿಯು ಕುಂಬಳೆ ಉಪಜಿಲ್ಲಾ ಘಟಕ ವತಿಯಿಂದ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಮತ್ತು ಯುವ ಉತ್ಸವ ಉದ್ಘಾಟಿಸಿ ಮಾತನಾಡಿದರು. ಭಾರತದ ಆಧ್ಯಾತ್ಮಿಕ ಚಿಂತನೆ ಮತ್ತು ಕೀರ್ತಿಪತಾಕೆಯನ್ನು ವಿಶ್ವಾದ್ಯಂತ ಪಸರಿಸಿದ ಮಹಾನ್‍ಚೇತನ ಸ್ವಾಮಿ ವಿವೇಕಾನಂದ ಅವರು ಯುವಸಮುದಾಯಕ್ಕೆ ಸ್ಪೂರ್ತಿದಾಯಕರಾಗಿದ್ದರು ಎಂದು ತಿಳಿಸಿದರು. ಎನ್.ಟಿ.ಯು ಕುಂಬಳೆ ಉಪಜಿಲ್ಲಾ ಸಮಿತಿ ಅಧ್ಯಕ್ಷ ರಾಮಚಂದ್ರನ್ ಕಾರಡ್ಕ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಘಟಕ ಅಧ್ಯಕ್ಷ ರಂಜಿತ್ ಪೆರ್ಲ ಉಪಸ್ಥಿತರಿದ್ದರು. ಚಂದ್ರಶೇಖರ ಐ.ಎನ್ ಸ್ವಾಗತಿಸಿದರು. ಪುರುಷೋತ್ತಮ ಕುಲಾಲ್ ವಂದಿಸಿದರು.
ಎನ್‍ಟಿಯು ವತಿಯಿಂದ ಸ್ವಾಮಿ ವಿವೇಕಾನಂದ ಜಯಂತಿ, ಯುವ ಉತ್ಸವ
0
ಜನವರಿ 13, 2023