ಬದಿಯಡ್ಕ: ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಗುರುವಾರ ದೇಲಂಪಾಡಿ ಗಣೇಶ ತಂತ್ರಿಗಳವರ ನೇತೃತ್ವದಲ್ಲಿ ವಿವಿಧ ಕಾರ್ಯಕ್ರಮಗಳು ಜರಗಿತು. ಬೆಳಗ್ಗೆ ಗಣಪತಿ ಹವನ, ನವಕಾಭಿಷೇಕ, ಮಧ್ಯಾಹ್ನ ತುಲಾಭಾರ ಸೇವೆ ನಡೆಯಿತು. ಬಳಿಕ ಮಹಾಪೂಜೆ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ ನಡೆಯಿತು. ರಾತ್ರಿ ರಂಗಪೂಜೆ, ಶ್ರೀಭೂತಬಲಿ ಉತ್ಸವ, ಬೆಡಿಸೇವೆ, ಬಟ್ಟಲು ಕಾಣಿಕೆ,ರಾಜಾಂಗಣ ಪ್ರಸಾದದೊಂದಿಗೆ ಕಾರ್ಯಕ್ರಮ ಸಂಪನ್ನವಾಯಿತು.
ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವಿ ನಾಟ್ಯಾಲಯದ ವತಿಯಿಂದ "ನೃತ್ಯಾರ್ಪಣಂ" ಭರತನಾಟ್ಯ ಹಾಗೂ ಜಾನಪದ ನೃತ್ಯ ಕಲಾರಸಿಕರ ಮನಗೆಲ್ಲುವಲ್ಲಿ ಯಶಸ್ವಿಯಾಯಿತು.
ಕಾರ್ಮಾರು ಶ್ರೀ ಮಹಾವಿಷ್ಣು ಕ್ಷೇತ್ರದ ಜಾತ್ರಾ ಮಹೋತ್ಸವ ಸಂಪನ್ನ
0
ಜನವರಿ 20, 2023